ಮೇ 31ರಂದು ಕೇರಳ, ಜೂನ್‌ ಮೊದಲ ವಾರದಲ್ಲಿ ಕರ್ನಾಟಕಕ್ಕೆ ನೈರುತ್ಯ ಮುಂಗಾರು ಆಗಮನ

ಬೆಂಗಳೂರು; ಕೆಲವು ದಿನಗಳಿಂದ ತೌಕ್ಟೆ, ಯಾಸ್ ಚಂಡಮಾರುತದ ಪ್ರಭಾವದಿಂದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಮೇ 31ರಂದು ನೈಋತ್ಯ ಮುಂಗಾರು ಭಾರತದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮೇ 31ರಂದು ನೈಋತ್ಯ ಮುಂಗಾರು ಕೇರಳದ ಕರಾವಳಿಗೆ ಅಪ್ಪಳಿಸುವ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ.ಜೂನ್‌ ಮೊದಲ ವಾರದಲ್ಲಿ ಕರ್ನಾಟಕದ ಕರಾವಳಿ ಪ್ರವೇಶಿಲಿದ್ದು, ಕರಾವಳಿ ಜಿಲ್ಲೆಗಳು ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಅದಾದ ಕೆಲವು ದನಗಳ ನಂತರ ಉತ್ತರ ಒಳನಾಡು ಪ್ರದೇಶಗಳಲ್ಲಿ ಮಳೆ ಆರಂಭವಾಗಲಿದೆ. ಈ ವರ್ಷ ಹಲವಾರ ಚಂಡಮಾರುತಗಳ ಪರಿಣಾಮ ಸಾಮಾನ್ಯವಾಗಿ ಪ್ರತಿ ತಿಂಗಳು ಮಳೆಯಾಗಿದೆ. ಈ ಬಾರಿ ಮುಂಗಾರು ಸಹ ವಾಡಿಕೆಯಂತೆ ಇರಲಿದ್ದು, ನಿರೀಕ್ಷಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರತದಲ್ಲಿ ಜೂನ್‌ 1ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಅವಧಿ ಎಂದು ಪರಿಗಣಿಸಲಾಗುತ್ತದೆ.
ಕೇರಳಕ್ಕೆ ಮುಂಗಾರು ಪ್ರವೇಶ ಮಾಡುತ್ತಿದ್ದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಆರಂಭವಾಗುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗುತ್ತದೆ.ಈ ವರ್ಷ ಹಲವಾರ ಚಂಡಮಾರುತಗಳ ಪರಿಣಾಮ ಸಾಮಾನ್ಯವಾಗಿ ಪ್ರತಿ ತಿಂಗಳು ಮಳೆಯಾಗಿದೆ. ಈ ಬಾರಿ ಮುಂಗಾರು ಸಹ ವಾಡಿಕೆಯಂತೆ ಇರಲಿದ್ದು, ನಿರೀಕ್ಷಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರತದ ಅಂದಾಜು ಶೇ 50ರಷ್ಟು ಕೃಷಿ ಭೂಮಿ ಜೂನ್‌ನಿಂದ ಸೆಪ್ಟೆಂಬರ್ ತನಕ ಸುರಿಯುವ ಮುಂಗಾರು ಮಳೆಯ ಮೇಲೆ ಅವಲಂಬಿತವಾಗಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement