ಹೋಟೆಲ್‌ಗಳ ಸಹಯೋಗದೊಂದಿಗೆ ಖಾಸಗಿ ಆಸ್ಪತ್ರೆಗಳಿಂದ ಕೋವಿಡ್ ವ್ಯಾಕ್ಸಿನೇಷನ್ ಪ್ಯಾಕೇಜ್‌ಗಳು ನಿಯಮಗಳಿಗೆ ವಿರುದ್ಧ, ತಕ್ಷಣವೇ ನಿಲ್ಲಿಸಿ:ಸರ್ಕಾರ

ನವ ದೆಹಲಿ: ಖಾಸಗಿ ಆಸ್ಪತ್ರೆಗಳು ಹೋಟೆಲ್‌ಗಳ ಸಹಯೋಗದೊಂದಿಗೆ ನೀಡುತ್ತಿರುವ ಕೋವಿಡ್ -19 ವ್ಯಾಕ್ಸಿನೇಷನ್ ಪ್ಯಾಕೇಜ್‌ಗಳು ರಾಷ್ಟ್ರೀಯ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕಾಗಿ ನೀಡಲಾದ ಮಾರ್ಗಸೂಚಿಗಳಿಗೆ ವಿರುದ್ಧವಾಗಿವೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಗಸೂಚಿಗಳ ಪ್ರಕಾರ, ಕೋವಿಡ್ ವ್ಯಾಕ್ಸಿನೇಷನ್ ಅನ್ನು ಸರ್ಕಾರಿ ಕೇಂದ್ರ, ಖಾಸಗಿ ಆಸ್ಪತ್ರೆ, ಸರ್ಕಾರಿ ಅಥವಾ ಖಾಸಗಿ ಕಚೇರಿಗಳು ನಡೆಸುವ ಖಾಸಗಿ ಕೇಂದ್ರ ಮತ್ತು ವೃದ್ಧರಿಗೆ ಮತ್ತು ವಿಭಿನ್ನ ಸಾಮರ್ಥ್ಯ ಹೊಂದಿರುವವರಿಗೆ (ತಾತ್ಕಾಲಿಕ ಆಧಾರದ ಮೇಲೆ) ಮನೆಯಿಂದ ಹತ್ತಿರವಿರುವ ಕೇಂದ್ರಗಳಲ್ಲಿ ಮಾತ್ರ ನಡೆಸಬಹುದಾಗಿದೆ.
ಆದ್ದರಿಂದ, ‘ಸ್ಟಾರ್ ಹೋಟೆಲ್‌ಗಳಲ್ಲಿ’ ನಡೆಸುವ ವ್ಯಾಕ್ಸಿನೇಷನ್ ನಿಯಮಗಳಿಗೆ ವಿರುದ್ಧವಾಗಿದೆ ಮತ್ತು “ತಕ್ಷಣವೇ ನಿಲ್ಲಿಸಬೇಕು” ಎಂದು ಆರೋಗ್ಯ ಸಚಿವಾಲಯದ ಸೂಚನೆ ತಿಳಿಸಿದೆ.
ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮ ಕೈಗೊಳ್ಳಲಾಗುವುದು. ಮಾರ್ಗಸೂಚಿಗಳ ಪ್ರಕಾರ ದೇಶದಲ್ಲಿ ಕೋವಿಡ್ -19 ವ್ಯಾಕ್ಸಿನೇಷನ್ ಡ್ರೈವ್ ನಡೆಯುತ್ತಿದೆ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.
ಇತ್ತೀಚಿನ ದಿನಗಳಲ್ಲಿ, ಅಂತಹ ಅನೇಕ ಹೋಟೆಲ್ ವ್ಯಾಕ್ಸಿನೇಷನ್ ಪ್ಯಾಕೇಜುಗಳು ಹೊರಬಂದಿವೆ, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement