1200 ಕೋಟಿ ರೂ. ಪರಿಹಾರ ಯಡಿಯೂರಪ್ಪ ತಮ್ಮ ಮನೆಯಿಂದ ಕೊಟ್ರಾ: ಡಿಕೆಶಿ ಪ್ರಶ್ನೆ

posted in: ರಾಜ್ಯ | 0

ಹುಬ್ಬಳ್ಳಿ:ಕೊರೊನಾ ಲಸಿಕೆಗಾಗಿ ನಾವು 100 ಕೋಟಿ ಕೊಟ್ಟರೆ ಅದಕ್ಕೆ ಕೊಂಕು ಮಾತನಾಡುವ ಬಿಜೆಪಿಯವರು, ಕೇವಲ 1200 ಕೋಟಿ ರೂ.ಗಳ ಕೊರೊನಾ ಪರಿಹಾರ ಪ್ಯಾಕೇಜ್ ಕೊಟ್ಟು ಸಾಕಷ್ಟು ಪ್ರಚಾರ ತೆಗೆದುಕೊಳ್ಳುತ್ತಾರೆ. ಆ 1200 ಕೋಟಿ ರೂ.ಯಡಿಯೂರಪ್ಪ ತಮ್ಮ ಮನೆಯಿಂದ ಕೊಟ್ಟಿದ್ದಾರೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಸೇರಿ 100 ಕೋಟಿ ಕೊಡಲು ಸಿದ್ಧರಾಗಿದ್ದೇವೆ. ನಾವು ಈ ವಿಚಾರದಲ್ಲಿ ಪಾರದರ್ಶಕವಾಗಿರುತ್ತೇವೆ, ಲಸಿಕೆ ಚುಚ್ಚಲು ಖರ್ಚು ಬೇಡ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮತಿ ಕೊಡುತ್ತಿಲ್ಲ ಎಂದು ದೂರಿದರು.
ಸರ್ಕಾರ ನಮಗೆ ಲಸಿಕೆ ನೀಡಲು ಅನುಮತಿ ಕೊಡುತ್ತಿಲ್ಲ. ಇದು ಯಾಕೆ ಎಂಬುದು ನಮಗೆ ತಿಳಿಯುತ್ತಿಲ್ಲ. ನಮ್ಮ ಉದ್ದೇಶ ಎಲ್ಲರಿಗೂ ಲಸಿಕೆಸಿಗಬೇಕು ಎಂಬುದಾಗಿದೆ. ಕೇಂದ್ರ ಸರ್ಕಾರ ಎಲ್ಲರಿಗೂ ಲಸಿಕೆ ಕೊಡಬೇಕಿತ್ತು. ಆದರೆ ಸರ್ಕಾರ ಇದೆಯೋ ಇಲ್ಲವೋ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ಎದುರಿಸಲು. ದೇಶ ಇದರಿಂದ ಬಚಾವ್ ಆಗಲು ಕೇಂದ್ರ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುತ್ತಿದ್ದೇವೆ. ಕೊರೊನಾಗೆ ಯಾವುದೇ ಜಾತಿ, ಧರ್ಮ ಇಲ್ಲ ಎಂದರು.
ತತ್ತರಿಸಿರುವವರಿಗೆ ರಾಜ್ಯ ಸರ್ಕಾರ ಬಿಡಿಗಾಸಿನ ಪರಿಹಾರ ಘೋಷಿಸಿದೆ. ತೋಟಗಾರಿಕೆಗೆ 10 ಸಾವಿರ ಘೋಷಣೆ ಮಾಡಿದ್ದಾರೆ. ಇದು ಒಂದು ಗುಂಟೆಗೆ ನೂರು ರೂಪಾಯಿ ಆಯಿತು. ಅದಕ್ಕೆ ಆರ್ಜಿ ಹಾಕಲು ಯಾರೂ ಬರುವುದಿಲ್ಲ. ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲ ಎಂದು ಟೀಕಿಸಿದರು..

ಓದಿರಿ :-   ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿ.ಎಸ್. ನಾಗಭೂಷಣ ನಿಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ