ಕೃಷಿ ಚಟುವಟಿಕೆಗೆ ಕೊರೊನಾ ಮಾರ್ಗಸೂಚಿ ಅಡ್ಡಿಯಾಗುವುದು ಬೇಡ

ಗದಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಶೇಕಡಾವಾರು ಪ್ರಮಾಣ ಇಳಿಮುಖವಾಗುತ್ತಿದೆ. ಮುಂಗಾರು ಹಂಗಾಮು ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಕೊರೊನಾ ಮಾರ್ಗಸೂಚಿಗಳು ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಸೂಚಿಸಿದರು.
ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಂಗಾರು ಹಂಗಾಮು ಆರಂಭವಾಗಿದ್ದು ಕೃಷಿ ಚಟುವಟಿಕೆಗೆ ಅಗತ್ಯವಿರುವ ಬೀಜ ಗೊಬ್ಬರ, ಯಂತ್ರೋಪಕರಣಗಳು ಸರಾಗವಾಗಿ ರೈತರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.
ರೈತರ ಬಿತ್ತನೆಗೆ ಅವಶ್ಯವಿರುವ ಬೀಜ ಗೊಬ್ಬರ ಹಾಗೂ ಕೀಟ ನಾಷಕಗಳ ಕೊರತೆಯಾಗದಂತೆ ಕೃಷಿ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕು. ಬಿತ್ತನೆ ಸಮಯವಾದ್ದರಿಂದ ಕಳಪೆ ಬಿತ್ತನೆ ಬೀಜ ಗೊಬ್ಬರ ಹಾಗೂ ಕೀಟ ನಾಶಕಗಳ ಮಾರಾಟ ತಡೆಯಬೇಕು. ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಬೀಜ ಗೊಬ್ಬರ ಮಾರಾಟ ಮಾಡದಂತೆ ಕೃಷಿ ಇಲಾಖೆಯ ಜಾರಿ ದಳ ಕಾರ್ಯತಂಡವು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement