ಸಹಕಾರ ಬ್ಯಾಂಕ್ ಗಳಿಗೆ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ :ಸಚಿವ ಸೋಮಶೇಖರ

ಬೆಂಗಳೂರು: ಸಹಕಾರ ಬ್ಯಾಂಕ್ ಗಳ ಮೂಲಕ ಈ ವರ್ಷ20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗುರಿ ತಲುಪಲು ರಾಜ್ಯದ 212 ಡಿಸಿಸಿ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ‌. 303 ಲಕ್ಷ ರೈತರನ್ನು ತಲುಪಲು ಗುರಿ ನೀಡಲಾಗಿದೆ ಎಂದರು‌.
2020-21 ನೇ ಸಾಲಿನಲ್ಲಿ 15400ಕೋಟಿ ರೂ. ಗುರಿ ನೀಡಲಾಗಿತ್ತು.17901 ಕೋಟಿ ರೂ. ಸಾಲ ನೀಡಲಾಗಿದೆ. ಇದರಲ್ಲಿ ಅಲ್ಪವಾಧಿ, ಮಧ್ಯಮಾವಧಿ, ದೀರ್ಘಾವಧಿ ಸಾಲಗಳು ಸೇರಿವೆ. ಲಾಕ್‌ಡೌನ್ ಮುಗಿದ ಬಳಿಕ ಎಲ್ಲ ಡಿಸಿಸಿ ಬ್ಯಾಂಕ್‌ಗಳಿಗೆ ಭೇಟಿ ನೀಡಲಾಗುವುದು ಎಂದು ಅವರು ಹೇಳಿದರು‌.
ಕಳೆದ ವರ್ಷ ಐದಾರು ಡಿಸಿಸಿ ಬ್ಯಾಂಕ್‌ಗಳು ಸ್ವಲ್ಪದರಲ್ಲಿ ಗುರಿ ತಲುಪಿಲ್ಲ. ಅವರಿಗೆ ಈ ವರ್ಷ ಗುರಿ ತಲುಪಲೇಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಮೈಸೂರು ಜಿಲ್ಲೆಯಲ್ಲಿ ಸಾವಿನ ವಿಚಾರ ಮುಚ್ಚಿಟ್ಟಿದ್ದಾರೆ ಎಂಬ ಶಾಸಕ ಸಾ.ರಾ. ಮಹೇಶ್ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನನಗೆ ಮಾಹಿತಿಯಿಲ್ಲ. ಮಾಹಿತಿ ತೆಗೆದುಕೊಳ್ಳುತ್ತೇನೆ. ನಮ್ಮ ಟಾರ್ಗೆಟ್ ಕೊರೊನಾ ಮುಕ್ತ ಮಾಡುವುದು. ಆ ಬಗ್ಗೆ ಎಲ್ಲರನ್ನೂ ಕೂರಿಸಿಕೊಂಡು ಮಾತನಾಡಲಾಗಿದೆ.
ಜಿಲ್ಲಾಧಿಕಾರಿ, ಸಂಸದರು, ಶಾಸಕರನ್ನು ಕೂರಿಸಿಕೊಂಡು ಎಲ್ಲರಿಗೂ ಹೇಳಿದ್ದೇನೆ. ಈ ಸಂದರ್ಭದಲ್ಲಿ ಇದೆಲ್ಲಾ ಬೇಡ ಎಂದು ಇಬ್ಬರಿಗೂ ಹೇಳಿದ್ದೇನೆ. ಇಂತಹವುದಕ್ಕೆ ನಾನು ಅವಕಾಶ ನೀಡುವುದಿಲ್ಲ. ಅಲ್ಲಿನ ಪರಿಸ್ಥಿತಿ ಹೇಗಿದೆ ಎಂದು ಇಂದು ಮುಖ್ಯಮಂತ್ರಿ ಗಮನಕ್ಕೆ ತರಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement