ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ 3 ಟನ್ ಆಕ್ಸಿಜನ್, 10 ಕಾನ್ಸಂಟ್ರೇಟರ್‌ ಜಿಲ್ಲಾಡಳಿತಕ್ಕೆ ಹಸ್ತಾಂತರ

ಯಾದಗಿರಿ : ಯಾದಗಿರಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ  (ಯೋಜನೆ) ವತಿಯಿಂದ ಜಿಲ್ಲಾಡಳಿತಕ್ಕೆ 3 ಟನ್ ಗಳ ಲಿಕ್ವಿಡ್ ಆಕ್ಸಿಜನ್ ಹಾಗೂ 10 ಆಮ್ಲಜನಕ ಸಾಂದ್ರಕಗಳನ್ನು ಹಸ್ತಾಂತರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ  ಡಾ. ರಾಗಪ್ರಿಯಾ. ಆರ್. ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಾದಗಿರಿ ಜಿಲ್ಲಾ ನಿರ್ದೇಶಕ ಕಮಲಾಕ್ಷ ಅವರು  ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಮಲಾಕ್ಷ ಅವರು ಮಾತನಾಡಿ, ಕೋವಿಡ್ ರೋಗಿಗಳಿಗೆ ಯಾವುದೇ ಕಾರಣಕ್ಕೂ ಆಮ್ಲಜನಕದ ತೊಂದರೆಯಾಗಬಾರದು ಎಂಬ ಸದುದ್ದೇಶದಿಂದ ನಮ್ಮ ಸಂಸ್ಥೆಯ ಜಿಲ್ಲಾ ಘಟಕ ವಿಶೇಷ ಆಸಕ್ತಿವಹಿಸಿ ಈ ಕಾರ್ಯವನ್ನು ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ವಿಮಾ ಸಮನ್ವಯಾಧಿಕಾರಿ ನಾಗರಾಜ, ಯೋಜನಾಧಿಕಾರಿ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು.

1 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement