ಮೀರತ್ ವಿವಿಯಲ್ಲಿ ತತ್ವಶಾಸ್ತ್ರ ಪಠ್ಯಕ್ರಮದ ಭಾಗವಾಗಿ ಯೋಗಿ, ರಾಮದೇವ್ ಪುಸ್ತಕಗಳು

ಲಖನೌ; ಮೀರತ್‌ನ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯ (ಮೀರತ್ ವಿಶ್ವವಿದ್ಯಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುತ್ತದೆ) ಇದು ಯೋಗ ಗುರು ಬಾಬಾ ರಾಮದೇವ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಯೋಗ ಕುರಿತ ಪುಸ್ತಕಗಳನ್ನು ತತ್ವಶಾಸ್ತ್ರದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪಠ್ಯಕ್ರಮದಲ್ಲಿ ಸೇರಿಸಲಿದೆ ಎಂದು ಖಚಿತಪಡಿಸಿದೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಕುರಿತು ಉತ್ತರ ಪ್ರದೇಶದ ರಾಜ್ಯ ಸಮಿತಿಯು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಬರೆದ ಪುಸ್ತಕಗಳನ್ನು ರಾಜ್ಯದಾದ್ಯಂತದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಅವುಗಳ ಅಂಗಸಂಸ್ಥೆ ಕಾಲೇಜುಗಳಲ್ಲಿ ತತ್ವಶಾಸ್ತ್ರ ಕೋರ್ಸ್ ಅಡಿಯಲ್ಲಿ ಈ ಎರಡು ಪುಸ್ತಕಗಳನ್ನು ಶಿಫಾರಸು ಮಾಡಲಾಗಿದೆ.

ಎರಡು ಪುಸ್ತಕಗಳನ್ನು ರಾಜ್ಯ ಸರ್ಕಾರವು ಶಿಫಾರಸು ಮಾಡಿದೆ ಮತ್ತು ಆದ್ದರಿಂದ ಇದನ್ನು ವಿಶ್ವವಿದ್ಯಾಲಯದ ಅಧ್ಯಯನ ಮಂಡಳಿಯು ಅನುಮೋದಿಸಿದೆ” ಎಂದು ಮಂಡಳಿಯ ಸಮಿತಿಯ ಸದಸ್ಯ ಮತ್ತು ಹಿಂದಿ ಕಲಾ ವಿಭಾಗದ ಮುಖ್ಯಸ್ಥ ಡಾ.ಎನ್.ಸಿ.ಲೋಹಾನಿ ತಿಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
“ಸಮಯದ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಇದನ್ನು ಮಾಡಲಾಗಿದೆ (ಪುಸ್ತಕಗಳನ್ನು ಸೇರಿಸುವುದು).” ಉತ್ತರ ಪ್ರದೇಶದ ಉನ್ನತ ಶಿಕ್ಷಣ ಇಲಾಖೆ ತತ್ವಶಾಸ್ತ್ರಕ್ಕಾಗಿ ಪುಸ್ತಕಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ ಸೇರಿಸಲು ಶಿಫಾರಸು ಮಾಡಿತ್ತು ಎಂದು ಡಾ.ಲೋಹಾನಿಯನ್ನು ಉಲ್ಲೇಖಿಸಿ ದಿ ಟೆಲಿಗ್ರಾಫ್ ವರದಿ ಮಾಡಿದೆ.
ಉತ್ತರಪ್ರದೇಶದ ಸರ್ಕಾರದ ಅಧೀನದಲ್ಲಿ ಇರುವ ಮೀರತ್‌ನ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯ (ಸಿಸಿಎಸ್‌ಯು) ಈಗಾಗಲೇ ತನ್ನ ಪಠ್ಯಕ್ರಮದಲ್ಲಿ ಪುಸ್ತಕಗಳನ್ನು ಸಂಯೋಜಿಸಿದೆ. ಇದರಲ್ಲಿ ‘ದಾರ್ಶನಿಕರಾದ’ ಬಾಬಾ ಮತ್ತು ಯೋಗಿ ಅವರ ಬಗ್ಗೆಯೇ ಪುಸ್ತಕಗಳಿವೆ, ಅವರು ಬರೆದ ಪುಸ್ತಕಗಳೇ ಪಠ್ಯವಾಗಿವೆ ಎಂದು ವರದಿಯಾಗಿದೆ.
ಆದಿತ್ಯನಾಥ್ ಅವರ ಹಠ ಯೋಗ ಕಾ ಸ್ವರೂಪ್ ವಾ ಸಾಧನಾ ಮತ್ತು ಬಾಬಾ ರಾಮದೇವ್ ಅವರ ಯೋಗ ಸಾಧನಾ ವಾ ಯೋಗ ಚಿಕಿತ್ಸಾ ರಹಸ್ಯ ಈಗ ವಿಶ್ವವಿದ್ಯಾಲಯದ ಎರಡನೇ ಸೆಮಿಸ್ಟರ್ ಪದವಿಪೂರ್ವ ತತ್ವಶಾಸ್ತ್ರ ಪಠ್ಯಕ್ರಮದ ಭಾಗವಾಗಿವೆ !
ಹೆಸರಿಸಲು ಇಚ್ಛಿಸದ ಪಠ್ಯಕ್ರಮ ಅಭಿವೃದ್ಧಿ ಸಮಿತಿಯ ಸದಸ್ಯರೊಬ್ಬರು, ಈ ಪುಸ್ತಕಗಳನ್ನು ಅವುಗಳ “ಉನ್ನತ ಸಾಹಿತ್ಯಿಕ ಮೌಲ್ಯ”ದ ಕಾರಣಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement