ವೃದ್ಧರಲ್ಲೂ ಶೇ.83 ರಷ್ಟು ಉತ್ತಮ ಫಲಿತಾಂಶ ನೀಡಿದ ಸ್ಪುಟ್ನಿಕ್-ವಿ ಲಸಿಕೆ !

ನವ ದೆಹಲಿ: ದೇಶದಲ್ಲಿ ಈವರೆಗೂ ಸೋಂಕು ನಿವಾರಣೆಗೆ ಕೋವ್ಯಾಕ್ಸಿನ್ ಹಾಗೂ ಕೋವಿಶಿಲ್ಡ್ ಎಂಬ ಎರಡು ಲಸಿಕೆಗಳನ್ನು ನೀಡಲಾಗುತ್ತಿದೆ. ರಷ್ಯಾದ ಸ್ಪುಟ್ನಿಕ್‌ ವಿಗೆ ಅನುಮೋದನೆ ನೀಡಿದ ನಂತರ ಮಾಸ್ಕೋದಿಂದ ಮೊದಲ ಬ್ಯಾಚ್​ ಸ್ಪುಟ್ನಿಕ್ ಲಸಿಕೆಯನ್ನು ಭಾರತಕ್ಕೆ ತರಲಾಗಿತ್ತು.​ ಆದರೆ, ಈ ನಡುವೆ ಸ್ಪುಟ್ನಿಕ್​ ಲಸಿಕೆಯ ಫಲಿತಾಂಶದ ಬಗ್ಗೆ ಹಲವು ಪ್ರಶ್ನೆಗಳು ಉದ್ಭವವಾಗಿದ್ದವು. ಆ ಎಲ್ಲಾ ಪ್ರಶ್ನೆಗಳಿಗೂ ಬುಧವಾರ ಬ್ಯೂನಸ್ ದೇಶದ ಆರೋಗ್ಯ ಸಚಿವಾಲಯ ಉತ್ತರ ನೀಡಿದೆ.
ಸ್ಪುಟ್ನಿಕ್​ ಲಸಿಕೆಯ ಫಲಿತಾಂಶದ ಬಗ್ಗೆ ಟ್ವೀಟ್​ ಮಾಡಿ ಮಾಹಿತಿ ನೀಡಿರುವ ಬ್ಯೂನಸ್ ದೇಶದ ಆರೋಗ್ಯ ಇಲಾಖೆ, “ರಷ್ಯಾದ ಸ್ಪುಟ್ನಿಕ್ ಲೈಟ್ ಕೋವಿಡ್ ಲಸಿಕೆ ವಯಸ್ಸಾದವರಲ್ಲೂ ಸಹ ಶೇ 78.6 ರಿಂದ 83.7 ರಷ್ಟು ಪರಿಣಾಮಕಾರಿತ್ವವನ್ನು ತೋರಿಸುತ್ತಿದೆ” ಎಂದು ತಿಳಿಸಿದೆ.
ಸ್ಪುಟ್ನಿಕ್ ವಿ ಲಸಿಕೆಯನ್ನು ಜೂನ್ 2ನೇ ವಾರದಿಂದ ಅಪೋಲೋ ಆಸ್ಪತ್ರೆ ಮುಖಾಂತರ ಸ್ಪುಟ್ನಿಕ್ ವಿ ಲಸಿಕೆ ನೀಡಲಾಗುವುದು ಎಂದು ಅಪೋಲೊ ಆಸ್ಪತ್ರೆ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಶೋಭನಾ ಕಾಮಿನೆನಿ ತಿಳಿಸಿದ್ದಾರೆ.
ರಷ್ಯಾದಿಂದ ಸ್ಪುಟ್ನಿಕ್-ವಿ ಲಸಿಕೆಯನ್ನು ಆಮದು ಮಾಡಿಕೊಳ್ಳಲಾಗಿದೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಭಾರತದಲ್ಲಿ ಲಸಿಕೆ ಕಾರ್ಯಕ್ರಮಕ್ಕೆ ವೇಗ ನೀಡುವ ಸಲುವಾಗಿ ರಷ್ಯಾ ಭಾರತದಲ್ಲಿ ನೇರ ಹೂಡಿಕೆ ಮಾಡಿದ್ದು, ದೆಹಲಿಯ ಪ್ಯಾನೇಸಿಯಾ ಬಯೋಟೆಕ್ ಸಹಯೋಗದೊಂದಿಗೆ ಪ್ರತಿ ವರ್ಷ 100 ಮಿಲಿಯನ್ ಡೋಸ್ ಸ್ಪುಟ್ನಿಕ್-ವಿ ಲಸಿಕೆಯನ್ನು ಉತ್ಪಾದಿಸಲಿದೆ ಎಂದು ತಿಳಿದುಬಂದಿದೆ. ಸ್ಪುಟ್ನಿಕ್-ವಿ ಲಸಿಕೆ ಕೊರೊನಾ ವೈರಸ್ ವಿರುದ್ಧ ವಿಶ್ವದ ಮೊಟ್ಟಮೊದಲ ನೋಂದಾಯಿತ ಲಸಿಕೆ ಎಂದು ಆರ್​ಡಿಐಎಫ್ ಹೇಳಿಕೆಯಲ್ಲಿ ತಿಳಿಸಿದೆ.
ದೆಹಲಿಯ ಪ್ಯಾನೇಸಿಯಾ ಬಯೋಟೆಕ್ ಸೌಲಭ್ಯಗಳಿಂದ ತಯಾರಿಸಿದ ಮೊದಲ ಬ್ಯಾಚ್​ನ ಲಸಿಕೆಯನ್ನು ಗುಣಮಟ್ಟದ ಪರಿಶೀಲನೆಗಾಗಿ ಮಾಸ್ಕೋ ಸಂಸ್ಥೆಯ ಗಮಲೇಯಾ ರವಾನಿಸಲಾಗುತ್ತದೆ. ಅಲ್ಲಿ ಪರೀಕ್ಷೆ ನಡೆಸಿದ ಬಳಿಕ ಭಾರತದಲ್ಲಿ ಈ ಲಸಿಕೆಯನ್ನು ನೀಡುವ ಕೆಲಸ ಆರಂಭವಾಗುತ್ತದೆ. ಭಾರತೀಯ ಉತ್ಪಾದಕರ ಸೌಲಭ್ಯಗಳು ಜಿಎಂಪಿ ಮಾನದಂಡಗಳಿಗೆ ಅನುಗುಣವಾಗಿರುತ್ತವೆ ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಯಿಂದ ಪೂರ್ವಭಾವಿಯಾಗಿರುತ್ತದೆ ಎಂದು ಆರ್‌ಡಿಐಎಫ್ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.
ಸ್ಪುಟ್ನಿಕ್-ವಿ ಲಸಿಕೆಯನ್ನು ಈ ವರ್ಷ ಏಪ್ರಿಲ್ 12 ರಂದು ಭಾರತದಲ್ಲಿ ತುರ್ತು ಬಳಕೆಗೆ ಅನುಮೋದನೆ ನೀಡಲಾಯಿತು. ಮೇ 14ರಿಂದ ರಷ್ಯಾದ ಸ್ಪುಟ್ನಿಕ್ ಲಸಿಕೆಯನ್ನು ಜನರಿಗೆ ನೀಡಲಾಗುತ್ತಿದೆ.
ಇಲ್ಲಿಯವರೆಗೆ, ಸ್ಪುಟ್ನಿಕ್ ವಿ ಲಸಿಕೆ ವಿಶ್ವದ 66 ದೇಶಗಳಲ್ಲಿ ನೋಂದಾಯಿಸಲ್ಪಟ್ಟಿದ್ದು, ಚುಚ್ಚುಮದ್ದಿನ ದಕ್ಷತೆಯು ಶೇ.97.6 ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ | ಹತ್ತಿರ ಬಂದು, ಕಾರಿನ ಕೆಳಕ್ಕೆ ತೂರಿ ಕಾರನ್ನು ಸ್ವಯಂ ಎತ್ತಿ-ಒಯ್ದು, ಪರ್ಫೆಕ್ಟ್‌ ಪಾರ್ಕ್ ಮಾಡುವ ರೋಬೋಟ್ ವ್ಯಾಲೆಟ್ | ವೀಕ್ಷಿಸಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement