ನಾಳೆಯಿಂದ ರಪ್ತು ಆಧಾರಿತ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕಿನ ಹೆಚ್ಚಳದಿಂದಾಗಿ ಜೂನ್ 7ರ ವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಜೂನ್ 7ರ ನಂತರವೂ ಲಾಕ್ ಡೌನ್ ಮುಂದುವರೆಯಲಿದೆ ಎನ್ನಲಾಗುತ್ತಿದೆ.

ಇದರ ನಡುವೆಯೂ ರಾಜ್ಯ ಸರ್ಕಾರ ಆರ್ಥಿಕ ಚಟುವಟಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಜೂನ್‌ 3ರಿಂದ (ನಾಳೆಯಿಂದ) ರಪ್ತು ಆಧಾರಿತ ಕೈಗಾರಿಕೆಗಳಿಗೆ ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಿದೆ.
ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ನಾಳೆಯಿಂದ ಶೇ.100ರಷ್ಟು ರಪ್ತು ಆಧಾರಿತ ಕೈಗಾರಿಕೆಗಳನ್ನು ಶೇ.50ರಷ್ಟು ಸಿಬ್ಬಂದಿಯೊಂದಿಗೆ ಪುನರಾರಂಭಕ್ಕೆ ಆದೇಶಿಸಿದ್ದಾರೆ.
ಒಂದು ಸಾವಿರಕ್ಕೂ ಹೆಚ್ಚು ನೌಕರರಿರುವ ರಪ್ತು ಆಧಾರಿತ ಚಟುವಟಿಕೆ ನಡೆಸುವಂತ ಕೈಗಾರಿಕೆಗಳಲ್ಲಿ ಪ್ರತಿ ವಾರದಲ್ಲಿ 2 ಬಾರಿ ಶೇ.10ರಷ್ಟು ಕಾರ್ಮಿಕರನ್ನು ಆರ್‌ಟಿ-ಪಿಸಿಆರ್‌ ಮೂಲಕ ಕೊರೊನಾ ಸೋಂಕು ಪತ್ತೆ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸಬೇಕು ಎಂಬುದಾಗಿ ತಿಳಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement