ಜೂನ್14ರ ವರೆಗೆ ಲಾಕ್ ಡೌನ್ ವಿಸ್ತರಣೆ, 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಅನ್ನು ಜೂ.14ರ ವರೆಗೆ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಗುರುವಾರ ಈ ವಿಷಯ ಪ್ರಕಟಿಸಿದ್ದಾರೆ.
ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರಿಸುವುದು ಸೂಕ್ತ ಎಂದು ಪರಿಗಣಿಸಿ 14-06-2021ರ ವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ವಿಸ್ತೃತ ಲಾಕ್‌ಡೌನ್ ಮುಂದುವರಿಯುತ್ತದೆ ಮತ್ತು ಯಾವುದೇ ಹೊಸ ಸಡಿಲಿಕೆಗಳನ್ನು ಘೋಷಿಸಲಾಗಿಲ್ಲ. ತಜ್ಞರು, ಮಂತ್ರಿಗಳು ಮತ್ತು ಸರ್ಕಾರಿ ಉನ್ನತ ಅಧಿಕಾರಿಗಳ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆ ವರೆಗೆ ಆಲ್ಕೋಹಾಲ್ ಅಂಗಡಿಗಳಿಗೆ ಪಾರ್ಸೆಲ್ ನೀಡಲು ಅವಕಾಶ ನೀಡಲಾಗುತ್ತದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 500 ಕೋಟಿ ಎರಡನೇ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಲಾಗುತ್ತಿದೆ. 7-06-2021ರಿಂದ ಶೇ.30ರಷ್ಟು ಕೋವಿಡ್ ವರ್ತನೆ ಪಾಲಿಸಿ ತೆರೆಯಲು ಅನುಮತಿಸಲಾಗಿದೆ. ಕೋವಿಡ್ ಪ್ಯಾಕೇಜ್ -2.. ಪವರ್ ಲೂಮ್ ನೇಕಾರರಿಗೆ ಇಬ್ಬರು ಕೆಲಸಗಾರರಿಗೆ ಮೀರದಂತೆ ಮೂರು ಸಾವಿರ ಪರಿಹಾರ ನೀಡಲಾಗುತ್ತದೆ.

ಚಲನಚಿತ್ರ ಮತ್ತು ದೂರದರ್ಶನ ಮಾಧ್ಯಮದಲ್ಲಿನ ಅಸಂಘಟಿತ ಕಾರ್ಮಿಕರು  3 ಸಾವಿರ ನೀಡಲಾಗುತ್ತದೆ. ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೊಂದಾಯಿಸಿದ ಮೀನುಗಾರರಿಗೆ ತಲಾ 3 ಸಾವಿರ ನೀಡಲಾಗುತ್ತದೆ. ಇನ್ ಲ್ಯಾಂಡ್ ದೋಣಿ ಮಾಲೀಕರಿಗೆ ಮೂರು ಸಾವಿರ ಕೂಡ ನೀಡಲಾಗುತ್ತದೆ ಎಂದು ತಿಳಿಸಿದರು.
ಮುಜರಾಯಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳಿಗೆ ಸಿ ವರ್ಗದ ದೇವಸ್ಥಾನದಲ್ಲಿ ಕೆಲಸ ಮಾಡುವವರಿಗೆ ತಲಾ ಮೂರು ಸಾವಿರ ನೀಡಲು ನಿರ್ಧಾರ ಮಾಡಲಾಗಿದೆ. ಮಸೀದಿಯಲ್ಲಿನ ಪೇಜಿಸಿಮೋಗಳಿಗೂ ತಲಾ ಮೂರು ಸಾವಿರ ಕೊಡಲು ನಿರ್ಧಾರ ಮಾಡಲಾಗಿದೆ ಎಂದರು.
ಆಶಾ ಕಾರ್ಯಕರ್ತರು ಕೂಡ ಕೊರೊನಾ ನಿಯಂತ್ರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಮೂರು ಸಾವಿರ ನೀಡಲಾಗುತ್ತದೆ. ಇದರಿಂದ 42574 ಕಾರ್ಯಕರ್ತೆಯರಿಗೆ ಸಹಾಯ ಆಗಲಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ನೀಡಲಾಗುತ್ತದೆ ಎಂದರು.
ಶಾಲೆಗಳು ಮುಚ್ಚಿದ್ದರೂ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ ಹಾಗೂ ನ್ಯಾಯವಾದಿಗಳ ಕಲ್ಯಾಣ ನಿಧಿಗೆ 5 ಕೋಟಿ ನೀಡಲು ನಿರ್ಧರಿಸಲಾಗಿದೆ ಎಂದರು.
ಕೈಗಾರಿಕೆಗಳಿಗೆ ಜೂನ್ 2021 ನಿಗದಿತ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಎಂಎಸ್‌ಎಂಇ ಕೈಗಾರಿಕೆ ಹೊರತುಪಡಿಸಿ, ಇತರೆ ಕೈಗಾರಿಕೆಗಳ ಗ್ರಾಹಕರಿಗೆ ಮೇ, ಜೂನ್ ತಿಂಗಳ ವಿದ್ಯುತ್ ಶುಲ್ಕ ಪಾವತಿಯಿಂದ ಜುಲೈ 30ರ ವರೆಗೆ ವಿನಾಯ್ತಿ ನೀಡಲಾಗಿದೆ ಎಂದರು.
ಈಗ ಸದ್ಯಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಒಂದು ವಾರದಲ್ಲೇ ಶೇ.5ರಷ್ಟು ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುವ ನಿರೀಕ್ಷೆ ಇದೆ. ಒಂದು ವೇಳೆ ಹಾಗಾದರೆ ಲಾಕ್ ಡೌನ್ ವಿಸ್ತರಿಸುವುದಿಲ್ಲ.ಆದರೆ ಕೊರೊನಾ ಪಾಸಿಟಿವಿಟಿ ದರ ಶೇ.5ರಷ್ಟುಅಥವಾ ಅದಕ್ಕಿಂತ ಕಡಿಮೆ ಬರಬೇಕು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಬಿಪಿಎಲ್‌ ಕಾರ್ಡ್ ಆದಾಯದ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ ; ಸಚಿವ ಮುನಿಯಪ್ಪ

ಕೋವಿಡ್ ಎರಡನೇ ಅಲೆ ಪ್ಯಾಕೇಜ್ ಯಾರ್ಯಾರಿಗೆ

*ಪವರ್ ಲೂಮ್ ನೇಕಾರರು
ಪ್ರತಿ ಪವರ್ ಲೂಮ್‍ಗೆ ಇಬ್ಬರು ಕೆಲಸಗಾರರಿಗೆ ಮೀರದಂತೆ ತಲಾ ರೂ 3,000ದಂತೆ ಪರಿಹಾರ ನೀಡಲು ನಿರ್ಧರಿಸಿದೆ. ಇದರಿಂದ ಸುಮಾರು 59 ಸಾವಿರ ಪವರ್ ಲೂಮ್‍ಗಳಿಗೆ 35 ಕೋಟಿ ವೆಚ್ಚವಾಗಲಿದೆ.

*ಚಲನಚಿತ್ರ ಮತ್ತು ದೂರದರ್ಶನ ಮಾಧ್ಯಮದಲ್ಲಿನ ಅಸಂಘಟಿತ ಕಾರ್ಮಿಕರು
ಚಲನಚಿತ್ರೋದ್ಯಮ ಹಾಗೂ ದೂರದರ್ಶನ ಮಾಧ್ಯಮದಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ (ಕಲಾವಿದರು, ತಂತ್ರಜ್ಞರು) ತಲಾರೂ 3,000ದಂತೆ ಪರಿಹಾರ ನೀಡಲು ನಿರ್ಧರಿಸಿದೆ. ಇದರಿಂದ ಸುಮಾರು 22 ಸಾವಿರ ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದ್ದು ರೂ 6.6 ಕೋಟಿ ವೆಚ್ಚವಾಗಲಿದೆ.

*ಮೀನುಗಾರರಿಗೆ ಪರಿಹಾರ
ಭಾರತ ಸರ್ಕಾರದ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೋಂದಾಯಿಸಿದ 18,746 ಮೀನುಗಾರರಿಗೆ ತಲಾ ರೂ 3000 ಗಳ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇದರಿಂದ ರೂ 5.6 ಕೋಟಿ ವೆಚ್ಚವಾಗಲಿದೆ.
ಇದಲ್ಲದೆ ಒಟ್ಟು 7,668 ಇನ್‍ಲ್ಯಾಂಡ್ ದೋಣಿ ಮಾಲಿಕರಿಗೆ ತಲಾ ರೂ 3,000ರಂತೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇದರಿಂದ 2.3 ಕೋಟಿ ರೂ. ವೆಚ್ಚವಾಗಲಿದೆ. ಇದಲ್ಲದೆ ಮೀನುಗಾರರ ಸಂಘಗಗಳಿಂದ ಒಳನಾಡು ಮೀನುಗಾರಿಗೆಕೆ ಸರ್ಕಾರಕ್ಕೆ ನೀಡಬೇಕಾಗಿರುವ ಕಾಂಟ್ರಾಕ್ಟ್ ಫೀಸ್‍ನಲ್ಲಿ ಶೇ.25 ರೀಯಾಯಿತಿಯನ್ನು ಸಹ ನೀಡಲು ನಿರ್ಧರಿಸಲಾಗಿದೆ.

*ಮುಜರಾಯಿ ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ
ಮುಜರಾಯಿ ಇಲಾಖೆಯ “ಸಿ” ವರ್ಗದ ದೇವಸ್ಥಾನಗಳಲ್ಲಿ ಕೆಲಸ ಮಾಡುವ ಅರ್ಚಕರು, ಅಡಿಗೆ ಕೆಲಸಗಾರರು ಮತ್ತು ಸಿಬ್ಬಂದಿಗಳಿಗೆ ತಲಾ ರೂ 3,000 ಗಳನ್ನು ನೀಡಲು ನಿರ್ಧರಿಸಲಾಗಿದೆ. ಈ ವರ್ಗದಲ್ಲಿ ಸುಮಾರು 36,047 ಜನರಿದ್ದು ಇದರಿಂದ 10.8 ಕೋಟಿ ರೂ.ಗಳಷ್ಟು ವೆಚ್ಚವಾಗಲಿದೆ.

* ಮಸೀದಿಗಳಲ್ಲಿ ಕಾರ್ಯನಿರ್ವಹಿಸುವ ಪೇಶ್ ಇಮಾಮ್ ಮತ್ತು ಫೌಜಿಂ ಗಳಿಗೆ ತಲಾ 3,000 ರೂ. ನೆರವು ನೀಡಲಾಗುವುದು.

6. ಆಶಾ ಕಾರ್ಯಕರ್ತೆಯರು
ಆಶಾ ಕಾರ್ಯಕರ್ತೆಯರು ಕೋವಿಡ್-19ನ ಸೋಂಕನ್ನು ತಡೆಯಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ವರ್ಗದವರಿಗೆ ಸಹಾಯ ಮಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಕರ್ನಾಟಕ ಸರ್ಕಾರವು ಕೋವಿಡ್-19 ತಡೆಗಟ್ಟುವಲ್ಲಿ ಫ್ರಂಟ್ ಲೈನ್ ವಾರಿಯರ್ಸ್ ಆದ ಆಶಾ ಕಾರ್ಯಕರ್ತರಿಗೆ ತಲಾ ರೂ 3,000 ಗಳ ಪರಿಹಾರ ನೀಡಲು ನಿರ್ಧರಿಸಿದೆ. ಇದರಿಂದ ಒಟ್ಟು 42,574 ಆಶಾ ಕಾರ್ಯಕರ್ತರಿಗೆ ಸಹಾಯವಾಗಲಿದ್ದು ಅಂದಾಜು 12.75 ಕೋಟಿ ರೂ.ವೆಚ್ಚವಾಗಲಿದೆ.

ಪ್ರಮುಖ ಸುದ್ದಿ :-   ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ ? ದೆಹಲಿಗೆ ತೆರಳಲಿರುವ ಸಿಎಂ ಡಿಕೆ ಶಿವಕುಮಾರ

*ಅಂಗನವಾಡಿ ಕಾರ್ಯಕರ್ತೆಯರು
64,423 ಅಂಗನವಾಡಿಯ ಕಾರ್ಯಕರ್ತರು ಹಾಗೂ 59,169 ಅಂಗನವಾಡಿ ಸಹಾಯಕರಿಗೆ ತಲಾ ರೂ 2,000 ಗಳಂತೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸರ್ಕಾರಕ್ಕೆ ಅಂದಾಜು 24.7 ಕೋಟಿ ರೂ. ವೆಚ್ಚವಾಗಲಿದೆ.

* ಶಾಲಾ ಮಕ್ಕಳಿಗೆ ಹಾಲಿನ ಪುಡಿಯನ್ನು ನೀಡುವ ಬಗ್ಗೆ
ಈ ಸಮಯದಲ್ಲಿ ಹಾಲಿನ ಬೇಡಿಕೆ ಕಡಿಮೆಯಾಗಿದ್ದು ಹೈನು ಉದ್ಯಮದಲ್ಲಿ ತೊಡಗಿಸಿಕೊಂಡ ರೈತರಿಗೆ ಸಮಸ್ಯೆಯಾಗದಂತೆ ಹೆಚ್ಚುವರಿ ಹಾಲಿನಿಂದ ಪುಡಿ ತಯಾರಿಸಲು ನಿರ್ಧರಿಸಲಾಗಿದೆ. ಎಲ್ಲಾ ಶಾಲೆಗಳು ಕಠಿಣ ನಿರ್ಬಂಧಗಳ ಹಿನ್ನೆಲೆಯಲ್ಲಿ  ಮುಚ್ಚಿದ್ದರೂ ಆಹಾರ ಧಾನ್ಯಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿದ್ದು ಹೆಚ್ಚುವರಿಯಾಗಿ ಆಹಾರ ಧಾನ್ಯಗಳ ಜೊತೆಗೆ ಅರ್ಧ ಕೆ.ಜಿ ಹಾಲಿನ ಪುಡಿಯನ್ನು ಜೂನ್ ಮತ್ತು ಜುಲೈ ತಿಂಗಳಿನಲ್ಲಿ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಸರ್ಕಾರಕ್ಕೆ ಅಂದಾಜು 100 ಕೋಟಿ ರೂ.ಗಳಷ್ಟು ವೆಚ್ಚವಾಗಲಿದೆ.

* ಅನುದಾನ ರಹಿತ ಶಾಲೆಗಳ ಶಿಕ್ಷಕರು
ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ತಲಾ 5,000 ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ ಸುಮಾರು 100 ಕೋಟಿ ರೂ. ವೆಚ್ಚವಾಗಲಿದೆ.

10. ನ್ಯಾಯವಾದಿಗಳಿಗೆ ಪರಿಹಾರ
ನ್ಯಾಯವಾದಿಗಳ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳು ನೀಡಲು ತೀರ್ಮಾನಿಸಲಾಗಿದೆ. ಈ ನಿಧಿಯನ್ನು ಅಗತ್ಯವಿರುವ ನ್ಯಾಯವಾದಿಗಳು ಮತ್ತು ಬೆಂಚ್ ಗುಮಾಸ್ತರುಗಳಿಗೆ ಉಪಯೋಗಿಸಲಾಗುವುದು.

* ಕೈಗಾರಿಕೆಗಳಿಗೆ ಪರಿಹಾರ
ಎಂಎಸ್‌ಎಂಇ (MSME) ಕೈಗಾರಿಕೆಗಳಿಗೆ ಮೇ ಮತ್ತು ಜೂನ್ 2021ರ ಮಾಹೆಗಳ ಮಾಸಿಕ ವಿದ್ಯುತ್ ನಿಗಧಿತ ಶುಲ್ಕಗಳನ್ನು (Fixed charges) ಪಾವತಿಸುವುದರಿಂದ ವಿನಾಯಿತಿಯನ್ನು ನೀಡಲಾಗುವುದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ 114.70 ಕೋಟಿ ರೂ.ಗಳು  ಹೆರೆಯಾಗುತ್ತದೆಂದು ಅಂದಾಜಿಸಿದೆ.
ಎಂಎಸ್‌ಎಂಇ ಕೈಗಾರಿಕೆಗಳನ್ನು ಹೊರತುಪಡಿಸಿ ಇತರೆ ಕೈಗಾರಿಕೆಗಳ ಗ್ರಾಹಕರು ಮೇ ಮತ್ತು ಜೂನ್ 2021ರ ಮಾಹೆಗಳ ಮಾಸಿಕ ವಿದ್ಯುತ್ ನಿಗದಿತ ಶುಲ್ಕ ಪಾವತಿಸುವುದನ್ನು ದಿನಾಂಕ:30-7-2021 ರವರೆಗೆ ಮುಂದೂಡಲಾಗುವುದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ  5.56 ಕೋಟಿ ರೂ.ಗಳು ಹೊರೆಯಾಗುತ್ತದೆಂದು ಅಂದಾಜಿಸಿದೆ.
ಈ ಎರಡು ಕ್ರಮಗಳಿಂದ ಸುಮಾರು 3 ಲಕ್ಷ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ.

 

3.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement