ಕರ್ನಾಟಕದ ಇಂದು, ನಾಳೆ ಭಾರೀ ಮಳೆ ಸಾಧ್ಯತೆ, 17 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ಕರ್ನಾಟಕದಲ್ಲಿ ಇನ್ನೂ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ , ದಕ್ಷಿಣ ಕನ್ನಡ , ಉಡುಪಿ, ಗದಗ , ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ, ತುಮಕೂರು, ಹಾಸನ, ಕೊಪ್ಪಳ, ದಾವಣಗೆರೆ, ಕಲಬುರ್ಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್​ ಘೋಷಿಸಲಾಗಿದೆ.
ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಮಳೆಯಾಗುವುದರಿಂದ 17 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಜೂನ್ 6ರ ವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಇಂದು (ಗುರುವಾರ) ಕೇರಳ ಪ್ರವೇಶಿಸಲಿದೆ. ಹೀಗಾಗಿ, ಕರ್ನಾಟಕದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕಕ್ಕೆ ಜೂನ್ 6 ಅಥವಾ 7ರಂದು ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದೆ.
ಈ ವರ್ಷ ಮುಂಗಾರು ಮಳೆ ಮೂರು ದಿನ ತಡವಾಗಿದ್ದು, ಇಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ. ಕರ್ನಾಟಕಕ್ಕೆ ಜೂನ್ 6 ಅಥವಾ 7ರಂದು ಪ್ರವೇಶವಾಗಲಿದೆ. ಇಂದಿನಿಂದ ಜೂನ್ 5ರವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದಿನಿಂದ ಮಳೆ ಬೀಳಲಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement