ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಬಿಎಸ್ಪಿ ಶಾಸಕರ ಉಚ್ಚಾಟನೆ

ಲಕ್ನೋ: ಇತ್ತೀಚೆಗೆ ನಡೆದ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಇಬ್ಬರು ಬಿಎಸ್ ಪಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಲಾಲ್ ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಬರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಎಸ್‌ಪಿ ಮೂಲಗಳು ತಿಳಿಸಿವೆ.
ವರ್ಮಾ ಅವರನ್ನು ಶಾಸಕಾಂಗ ಪಕ್ಷದ ಮುಖಂಡ ಸ್ಥಾನದಿಂದ ತೆಗೆದುಹಾಕಲಾಗಿದೆ ಮತ್ತು ಶಾ ಆಲಂ ಅಲಿಯಾಸ್ ಗುಡ್ಡು ಜಮಾಲಿ ಅವರನ್ನು ರಾಜ್ಯ ವಿಧಾನಸಭೆಯಲ್ಲಿ ಪಕ್ಷದ ನಾಯಕರಾಗಿ ನೇಮಕ ಮಾಡುವ ಸಾಧ್ಯತೆಯಿದೆ.
ಲಾಲ್ಜಿ ವರ್ಮಾ ಅವರು ಕತೇರಿ ಸ್ಥಾನದಿಂದ ಬಿಎಸ್ಪಿ ಶಾಸಕರಾಗಿದ್ದರೆ, ರಾಜ್ಭರ್ ಅವರು ರಾಜ್ಯದ ಅಂಬೇಡ್ಕರ್ ನಗರ ಜಿಲ್ಲೆಯ ಅಕ್ಬರ್ಪುರ ಸ್ಥಾನದ ಶಾಸಕರಾಗಿದ್ದಾರೆ. ಹೊಸದಾಗಿ ನೇಮಕಗೊಂಡ ಶಾಸಕಾಂಗ ಪಕ್ಷದ ನಾಯಕ ಶಾ ಆಲಂ ಅವರು ಅಜಮ್‌ಘರ್ ಜಿಲ್ಲೆಯ ಮುಬಾರಕ್‌ಪುರ ಕ್ಷೇತ್ರದ ಶಾಸಕರಾಗಿದ್ದಾರೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement