ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ – ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಸಂಘರ್ಷ ನನ್ನ ಕೈ ಮೀರಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ಸಂಘರ್ಷ ನನ್ನ ವ್ಯಾಪ್ತಿಯಲ್ಲಿ ಉಳಿದಿಲ್ಲ. ಮುಖ್ಯಮಂತ್ರಿಗಳಿಗೆ ಎಲ್ಲವನ್ನೂ ತಿಳಿಸಿದ್ದೇನೆ. ಇನ್ನು ಎರಡು ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೊಂಕು ನಿರ್ವಹಣೆ ನನ್ನ ಪ್ರಥಮ ಆದ್ಯತೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ನನ್ನ ಆದ್ಯತೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಯಾರು ಸರಿ ಯಾರು ತಪ್ಪು ಅಂತ ಹೇಳಲ್ಲ. ಎಲ್ಲವನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ನನ್ನ ಆದ್ಯತೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಯಾರು ಸರಿ ಯಾರು ತಪ್ಪು ಎಂದು ನಾನು ಹೇಳಲು ಹೋಗುವುದಿಲ್ಲ. ಎಲ್ಲವನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಶಿಲ್ಪಾನಾಗ್ ಮೈಸೂರು ಪಾಲಿಕೆ ಆಯುಕ್ತೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಇಬ್ಬರು ಅಧಿಕಾರಿಗಳ ನಡುವಿನ ಸಂಘರ್ಷ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ