ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶುಕ್ರವಾರ ಪ್ರಕಟಿಸಿದ್ದಾರೆ. ಆದರೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಾಗಿ ಸುರೇಶ್ ಕುಮಾರ್ ಹೇಳಿರುವುದು ತಾತ್ಕಾಲಿಕ ನಿರ್ಧಾರವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಒಂದು ವೇಳೆ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಳವಾದರೆ ಪರೀಕ್ಷೆ ನಡೆಸುವ ನಿರ್ಧಾರ ಕೈಬಿಡಲಾಗುತ್ತದೆ. ಈ ಬಗ್ಗೆ ಮುಂದಿನ ಪರಿಸ್ಥಿತಿ ನೋಡಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಈಗ ಪರೀಕ್ಷೆ ನಡೆಸಲು ಸದ್ಯದ ಪರಿಸ್ಥಿತಿ ಗನದಲ್ಲಿಟ್ಟು ತೀರ್ಮಾನ ತೆಗೆದುಕೊಳ್ಳಲಾಗಿದೆ. ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದರು. ಪರೀಕ್ಷೆ ನಡೆಸುವ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ. ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಕೊರೋನಾ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಈ ಬಾರಿ 6000 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಕಳೆದ ವರ್ಷ ಮೂರು ಸಾವಿರ ಮಾತ್ರ ಇದ್ದವು. ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿಯನ್ನು ಕೂರಿಸಲಾಗುತ್ತದೆ. ಒಂದು ರೂಮ್ ನಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸುರೇಶಕುಮಾರ ಹೇಳಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ