
ನವ ದೆಹಲಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ಪ್ರಧಾನಿ ನರೇಂದ್ರ ಮೋದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಮತ್ತೆ ಜೈಲು ಸೇರಿದ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ಖಜೂರಿ ಖಾಸ್ ಪ್ರದೇಶದ ಸಲ್ಮಾನ್ (22) ಬಂಧಿತ ಎಂಬಾತ ಬಂಧಿತ ಆರೋಪಿ. ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಸಲ್ಮಾನ್ ಬಂಧಿತನಾಗಿ ಜೈಲಿನಲ್ಲಿದ್ದ. ಇತ್ತೀಚೆಗೆ ಜಾಮೀನ ಮೇಲೆ ಬಿಡುಗಡೆಯಾಗಿದ್ದ. ಕಳೆದ ರಾತ್ರಿ ಪೊಲೀಸರಿಗೆ ಫೋನ್ ಮಾಡಿ ನಾನು ಮೋದಿಯನ್ನು ಕೊಲ್ಲಲು ಸಂಚು ರೂಪಿಸಿದ್ದೇನೆ ಎಂದು ಬೆದರಿಕೆ ಹಾಕಿದ್ದ. ತಕ್ಷಣ ಆರೋಪಿಯನ್ನು ಬಂಧಿಸಿದ್ದಾರೆ. ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ತಾನು ಮತ್ತೆ ಜೈಲಿಗೆ ಹೋಗಬೇಕೆಂದು ಈ ರೀತಿ ಪ್ರಧಾನಿ ಕೊಲ್ಲುವ ಬೆದರಿಕೆ ಹಾಕಿದ್ದೇನೆ ಎಂದು ಆತ ಹೇಳಿದ್ದಾನೆ.
ಆದರೆ ಪೊಲೀಸರು ಹಾಗೂ ಪ್ರಧಾನಿ ಕಚೇರಿಯ ಗುಪ್ತದಳ ಅಧಿಕಾರಿಗಳು ವಿಷಯವ್ನು ಹಗುರವಾಗಿ ತೆಗೆದುಕೊಳ್ಳದೆ ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಕರೆ ಮಾಡಿದ್ದಕ್ಕಾಗಿ ಪೊಲೀಸರು ಸಲ್ಮಾನ್ ವಿರುದ್ಧ ಪ್ರಕರಣ ದಾಖಲಿಸಿ ಮತ್ತೆ ಜೈಲಿಗೆ ಕಳುಹಿಸಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ