ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಇಂದಿನಿಂದ (ಶನಿವಾರದಿಂದ) ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ.
ಇಂದು, ನಾಳೆ ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ಕರ್ನಾಟಕದಲ್ಲಿ ಇನ್ನೂ 2 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರಿನಲ್ಲಿ ಶನಿವಾರ ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದೆ. ಶುಕ್ರವಾರ ಸಂಜೆಯಿಂದ ಸುರಿಯಲಾರಂಭಿಸಿದ ಮಳೆ ಇನ್ನೂ ನಿಂತಿಲ್ಲ. ಜೂನ್ 6ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಅದರ ಪರಿಣಾಮವಾಗಿ ಕರ್ನಾಟಕದ ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ.
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ, ತುಮಕೂರು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಕಾರಣಕ್ಕೆ ಹಳದಿ ಅಲರ್ಟ್​ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಲಕ್ಷದ್ವೀಪ, ಪುದುಚೆರಿ, ತಮಿಳುನಾಡಿಗೆ ಇನ್ನೆರಡು ದಿನಗಳೊಳಗೆ ಮುಂಗಾರು ಪ್ರವೇಶವಾಗಲಿದೆ.

ಪ್ರಮುಖ ಸುದ್ದಿ :-   ಬಿಪಿಎಲ್‌ ಕಾರ್ಡ್ ಆದಾಯದ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ ; ಸಚಿವ ಮುನಿಯಪ್ಪ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement