ಬೆಂಗಳೂರು: ಜೂನ್ 14ರ ನಂತರ ಬೆಂಗಳೂರು ಸೇರಿದಂತೆ ಹಲವೆಡೆ ಲಾಕ್ ಡೌನ್ ತೆರವು ಆಗಬಹುದು ಎಂಬ ಸುಳಿವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ಕಡೆ ಲಾಕ್ ಡೌನ್ ನ್ನು ಸಡಿಲಿಕೆ ಮಾಡಿ ಅನ್ ಲಾಕ್ ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಬಗ್ಗೆ ಪ್ರತಿ ಜಿಲ್ಲೆಗಳ ಕೊರೊನಾ ಸ್ಥಿತಿಗತಿ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಈಗಿನ ಲಾಕ್ ಡೌನ್ ಜೂನ್ 14ರ ಬೆಳಗ್ಗೆ 6 ಗಂಟೆಗೆ ಕೊನೆಯಾಗಲಿದ್ದು ಅದಕ್ಕೂ ನಾಲ್ಕೈದು ದಿನ ಮೊದಲು ಅನ್ ಲಾಕ್ ಮಾಡಬೇಕೇ ಬೇಡವೇ ಅ? ಅಲ್ಲಾಕ್ ಮಾಡಬೇಕೆಂದರೆ, ಯಾವ ರೀತಿಯಲ್ಲಿ ಸಡಿಲಿಕೆ ಮಾಡಬೇಕೆಂದು ನಿರ್ಧರಿಸಲಾಗುವುದು. ಕೊರೋನಾ ಪಾಸಿಟಿವಿಟಿ ದರ ಶೇಕಡಾ 5ಕ್ಕೆ ಬರಬೇಕು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಪಾಸಿಟಿವಿಟಿ ರೇಟ್ ಶೇಕಡಾ 5ಕ್ಕಿಂತ ಕಡಿಮೆಯಾದ ಜಿಲ್ಲೆಗಳಲ್ಲಿ ಹಂತ ಹಂತಕ್ಕೆ ಅನ್ ಲಾಕ್ ಮಾಡುವ ಪ್ರಕ್ರಿಯೆಯನ್ನು ಮಾಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ ಎಂದರು.
ಕೊರೊನಾ ಸಕ್ರಿಯ ಸೋಂಕಿತರ ಸಂಖ್ಯೆ 5 ಸಾವಿರಕ್ಕೆ ಬಂದರೆ, ಶೇಕಡಾ ಸಕಾರಾತ್ಮಕ ದರ 5ಕ್ಕೆ ಇಳಿಕೆಯಾದರೆ ಅನ್ ಲಾಕ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಒಲವು ತೋರಿಸಿದ್ದಾರೆ ಎಂದು ಹೇಳಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ