ಮಹತ್ವದ ಸುದ್ದಿ.. ಎಸ್ಸೆಸ್ಸೆಲ್ಸಿಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ : ಸಚಿವ ಸುರೇಶಕುಮಾರ

ಬೆಂಗಳೂರು :ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸಿರುವುದುನ್ನು ಪ್ರಕಟಿಸಿದ್ದರು. ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿ ಅಂಕ ಆಧರಿಸಿ ಪಾಸ್ ಮಾಡುವುದಾಗಿ ತಿಳಿಸಿದ್ದರು. ಇಂದು (ಶನಿವಾರ) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ ನೀಡಿದ್ದು, ಎಸ್ಎಸ್ಎಲ್‌ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದುಗಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನ ಸಂದರ್ಭದಲ್ಲಿ, ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯ ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಕರ್ನಾಟಕ‌ ಪ್ರೌಢ ಶಿಕ್ಷಣ‌ಪರೀಕ್ಷಾ ಮಂಡಳಿಯ ವತಿಯಿಂದ‌ ಅಂಕಿ ಅಂಶಗಳನ್ನು ಪಡೆದು, ಪ್ರಥಮ ಪಿಯು ಅಂಕಗಳೊಂದಿಗೆ ಎಸ್ಎಸ್ಎಲ್‌ಸಿ ಅಂಕಗಳನ್ನೂ ಪರಿಗಣಿಸಿ ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

4.1 / 5. 15

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement