ಕರ್ನಾಟಕದಲ್ಲಿ 1784 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ, 111 ಜನರ ಸಾವು:ಡಾ.ಸುಧಾಕರ

ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ 1784 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಆದರೆ 111 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇದಕ್ಕೆ ಬೇಕಾದ ಔಷಧಿಯನ್ನು ಪಡೆಯಲಾಗಿದೆ. ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲಾ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ 1,784 ಪ್ರಕರಣ ಕಂಡುಬಂದಿದೆ. 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತನಿಗೆ ಕನಿಷ್ಠ 2-3 ವಾರಗಳ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ ಚಿಕಿತ್ಸೆ ಬೇಕು ಎಂದು ತಿಳಿಸಿದರು.
ಕಪ್ಪು ಶಿಲೀಂಧ್ರ ಸೋಂಕಿಗೆ ಆಂಫೊಟೆರಿಸಿನ್ ಬಿ ಔಷಧಿ ಬೇಕಾಗುತ್ತದೆ. ಕೇಂದ್ರ ಸರ್ಕಾರವು 9,750 ವೈಲ್ ಗಳನ್ನು ರಾಜ್ಯಕ್ಕೆ ಹಂಚಿಕೆ ಮಾಡಿದೆ. ಇದರಲ್ಲಿ 8,860 ವೈಲ್ ಶುಕ್ರವಾರ ಬಂದಿದೆ. ಒಟ್ಟು 18,650 ವೈಲ್ ಗಳು ರಾಜ್ಯಕ್ಕೆ ದೊರೆತಿವೆ. ಸರ್ಕಾರಿ ಆಸ್ಪತ್ರೆಗಳಿಗೆ 8,860 ವೈಲ್ ಗಳನ್ನು ಬಳಸಲಾಗಿದೆ. ಖಾಸಗಿ ಆಸ್ಪತ್ರೆಗಳು ಸೇರಿ ಬೇರೆ ಕಡೆಗಳಿಗೆ 9,740 ವೈಲ್ ನೀಡಲಾಗಿದೆ ಎಂದು ತಿಳಿಸಿದರು.
ಕೋವಿಡ್ ಲಸಿಕೆಯ 58 ಲಕ್ಷ ಡೋಸ್ ಗಳನ್ನು ನೀಡಲಾಗುವುದು. 70-75 ಲಕ್ಷ ಜನರಿಗೆ ಇದೇ ತಿಂಗಳಲ್ಲಿ ಲಸಿಕೆ ಹಾಕಲಾಗುವುದು. ರಾಜ್ಯದಲ್ಲಿ ಈವರೆಗೆ ಒಂದೂವರೆ ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಜೂನ್ ಅಂತ್ಯಕ್ಕೆ ರಾಜ್ಯದ 2.25 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ. ಆದಷ್ಟು ಶೀಘ್ರದಲ್ಲೇ ಎಲ್ಲರಿಗೂ ಲಸಿಕೆ ದೊರೆಯಲಿದೆ ಎಂದರು.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement