ಜೂನ್ 7ರಿಂದ ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್ ನಲ್ಲಿ ವಿನಾಯಿತಿ : ಬೆಳಿಗ್ಗೆ 6 ರಿಂದ 10ರ ವರೆಗೆ ಅಗತ್ಯ ಸೇವೆಗಳಿಗೆ ಅನುಮತಿ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಇಳಿಮುಖವಾಗುತ್ತಿದೆ. ರಾಜ್ಯ ಸರ್ಕಾರ ಜೂ.14 ರ ವರೆಗೆ ಲಾಕ್‌ಡೌನ್‌ ಮುಂದುವರಿಸಲು ಸೂಚಿಸಿದೆ. ಜೂನ್‌ 7 (ಸೋಮವಾರ)ರಿಂದ ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮಗಳಲ್ಲಿ ಅಲ್ಪ ವಿನಾಯಿತ ನೀಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ‌ ತೀರ್ಮಾನಿಸಲಾಯಿತು.
ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ, ಜಿ.ಪಂ.ಸಿಇಓ ಡಾ.ಬಿ.ಸುಶೀಲ, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸದ್ಯ ಹಾಲು ತರಕಾರಿ ಸೇವೆಗಳಿಗೆ ಮಾತ್ರ ಬೆಳಿಗ್ಗೆ 6 ರಿಂದ 8 ಗಂಟೆ ವರೆಗೆ ಅವಕಾಶವಿದೆ. ಈಗ ಈ ಸಮಯವನ್ನು ಬೆಳಿಗ್ಗೆ 10 ಗಂಟೆ ವರೆಗೆ ವಿಸ್ತರಿಸಿ ಹಾಲು‌,ತರಕಾರಿ, ಕಿರಾಣಿ ಅಂಗಡಿ, ಹೋಟಲ್ ಹಾಗೂ ಮದ್ಯ ಅಂಗಡಿಗಳಲ್ಲಿ ಪಾರ್ಸಲ್ ಸೇವೆಗೆ ಅವಕಾಶ ನೀಡಲಾಗುವುದು, ಹೋಟೆಲ್‌ಗಳ ಮೂಲಕ ಹೋಮ್ ಡಿಲೆವರಿಗೆ ರಾತ್ರಿ 8ರ ವರೆಗೆ ಸಮಯಾಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚಿಸಿದರು.
ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಲಸಿಕೆ ಕಾರ್ಯ ಚುರುಕುಗೊಳ್ಳಬೇಕು. ಸರ್ಕಾರದ ಪರಿಷ್ಕೃತ ಆದೇಶದಂತೆ ಆದ್ಯತೆ ಮತ್ತು ದುರ್ಬಲ ವರ್ಗದವರಿಗೆ ಕಡ್ಠಾಯವಾಗಿ ಲಸಿಕೆ ನೀಡಿಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು‌.
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಹಣ್ಣು ಬೆಳೆಗಾರರಿಗೆ ರೂ. 1,08,64,487 ಹಾಗೂ ತರಕಾರಿ ಬೆಳಗಾರಿಗೆ ರೂ.55,400 ಬಿಡುಗಡೆಯಾಗಿದೆ. ಹೂ ಬೆಳೆಗಾರರಿಗೆ ರೂ.10,73,529 ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವರ್ತುಲ ರಸ್ತೆ‌ ಕಾಮಗಾರಿ ತ್ವರಿತ ರೀತಿಯಲ್ಲಿ ಕೈಗೊಳ್ಳುವಂತೆ ಸಂಬಂಧ ಪಟ್ಟ ಇಂಜಿನಿಯರ್‌ಗಳಿಗೆ ಸೂಚಿಸಲಾಯಿತು. ಕಿಮ್ಸ್ ಆವರಣದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ತಾಯಿ ಮತ್ತು ಮಕ್ಕಳ ಹಾರೈಕೆ ಆಸ್ಪತ್ರೆ ಕಿಮ್ಸ್‌ಗೆ ಹಸ್ತಾಂತರಿಸುವಂತೆ ನಿರ್ದೇಶನ ನೀಡಲಾಯಿತು.
ವಾ.ಕ.ರ.ಸಾ.ಸಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಯಶವಂತ ಮದೀನಕರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

ಲಾಕ್‌ಡೌನ್‌ ಆದೇಶದ ಪ್ರತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

Lock Down Order (1)

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement