ಬೆಂಗಳೂರಲ್ಲಿ ಶನಿವಾರ 3 ಸಾವಿರಕ್ಕಿಂತ ಕಡಿಮೆ ದಾಖಲಾದ ಹೊಸ ಕೊರೊನಾ ಸೋಂಕು.. ಆದರೆ ಕುಸಿಯದ ಮರಣ ಪ್ರಮಾಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13800 ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2683314ಕ್ಕೆ ಏರಿಕೆಯಾಗಿದೆ.
25346 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 268275ಕ್ಕೆ ಇಳಿದಿದೆ.
ಸೋಂಕಿನಿಂದಾಗಿ 365 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 31260ಕ್ಕೆ ಏರಿಕೆಯಾಗಿದೆ.
ಬೆಂಗಳೂರು ಮಹಾನಗರದಲ್ಲಿಂದು 2686 ಹೊಸ ಪ್ರಕರಣಗಳು ವರದಿಯಾಗಿದ್ದು, 206 ಮಂದಿ ಮೃತಪಟ್ಟಿದ್ದಾರೆ. 8852 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.9.69, ಮರಣ ಪ್ರಮಾಣ ಶೇ. 2.64 ರಷ್ಟಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ಲ್ಲಿ ಕೆಳಗೆ ಕೊಡಲಾಗಿದೆ.

05-06-2021 HMB Kannada

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement