ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್‌ ಇಬ್ಬರನ್ನೂ ವರ್ಗಾವಣೆ ಮಾಡಿದ ಸರ್ಕಾರ: ಐಎಎಸ್‌ಗಳ ಜಟಾಪಟಿಗೆ ತೆರೆ

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಭಾರೀ ಚರ್ಚೆಗೆ ಗ್ರಾಸವಾಗಿ ಈಗ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರನ್ನು ವರ್ಗಾವಣೆ ಮಾಡಿ ಶನಿವಾರ ರಾತ್ರಿ ಸರ್ಕಾರ ಆದೇಶ ಹೊರಡಿಸಿದೆ.
ರೋಹಿಣಿ ಸಿಂಧೂರಿ ಬದಲಿಗೆ ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ಅವರನ್ನು ನೇಮಕ ಮಾಡಲಾಗಿದೆ ಹಾಗೂ ಶಿಲ್ಪಾ ನಾಗ್‌ ಬದಲಿಗೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರು ನೇಮಕಗೊಂಡಿದ್ದಾರೆ.
ರೋಹಿಣಿ ಸಿಂಧೂರಿಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಮೊದಲು ರೋಹಿಣಿ ಇದೇ ಇಲಾಖೆಯ ಆಯುಕ್ತರಾಗಿದ್ದರು.
ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾ ನಾಗ್‌ ಅವರನ್ನು (ಇ-ಆಡಳಿತ) ಬೆಂಗಳೂರಿನ ಆರ್‌ಡಿ ಮತ್ತು ಪಿಆರ್, ನಿರ್ದೇಶಕರ ಹುದ್ದೆಗೆ ನೇಮಕ ಮಾಡಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಂಡಿಯಾಗಿದ್ದ ಲಕ್ಷ್ಮೀಕಾಂತ್ ರೆಡ್ಡಿ ಇದೀಗ ಮೈಸೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತಾಗಿದ್ದ ಡಾ. ಬಗಾದಿ ಗೌತಮ್ ಅವರು ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಈಗ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಟಾಪಟಿ ಸರ್ಕಾರಕ್ಕೆ ತಲೆನೋವಾಗಿತ್ತು. ಆದ್ದರಿಂದ ಇಬ್ಬರನ್ನು ಸಹ ವರ್ಗಾವಣೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement