ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವೆ: ಸಿಎಂ ಬಿಎಸ್‌ವೈ ಸ್ಫೋಟಕ ಹೇಳಿಕೆಗೆ ರಾಜಕೀಯದಲ್ಲಿ ತೀವ್ರ ಸಂಚಲನ

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ.

ಭಾನುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡಿಗೆ ಎಲ್ಲಿ ವರೆಗೆ ನನ್ನ ಮೇಲೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಒಳಿತಿಗಾಗಿ ಕೆಲಸ ಮಾಡುತ್ತೇನೆ, ಈ ವಿಷಯದಲ್ಲಿ ನನಗೆ ಯಾವುದೇ ಗೊಂದಲವಿಲ್ಲ. ಯಾವಾಗ ಅವರಿಗೆ ನನ್ನ ಮೇಲೆ ವಿಶ್ವಾಸ ಹೋಗುತ್ತದೆಯೋ ಅಂದು ರಾಜೀನಾಮೆ ನೀಡುತ್ತೇನೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಹೈಕಮಾಂಡ್‌ ಯಾವ ದಿನ ಯಡಿಯೂರಪ್ಪನವರೇ ಬೇಡ ಎಂದು ಹೇಳುತ್ತಾರೋ ಆಗ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯುತ್ತೇನೆ, ಅಲ್ಲಿ ವರೆಗೆ ಕೆಲಸ ಮಾಡುತ್ತೇನೆ. ರಾಜೀನಾಮೆ ನೀಡಿ ಜನತೆ ಪರ ಕೆಲಸ ಮಾಡುತ್ತೇನೆ, ಕರ್ನಾಟಕ ಬಿಜೆಪಿಯಲ್ಲಿ ನನ್ನ ಬದಲಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪುವುದಿಲ್ಲ ಎಂದೂ ಅವರು ಹೇಳಿದ್ದಾರೆ.
ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ, ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ, ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ದೆಹಲಿಯ ಭೇಟಿ ಬಳಿಕ ಯಡಿಯೂರಪ್ಪ ಇಂತಹ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎನ್ನುವ ಕುರಿತಾಗಿ ಚರ್ಚೆ ನಡೆದಿರುವ ಹೊತ್ತಲ್ಲೇ ಇಂತಹ ಹೇಳಿಕೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement