ಕರ್ನಾಟಕದಲ್ಲಿ ಸೋಮವಾರ 12 ಸಾವಿರಕ್ಕಿಂತ ಕಡಿಮೆಯಾದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು; ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 11,958 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿದ್ದು, 340 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ಒಟ್ಟಾರೆ ಸೋಂಕಿತರ 27,07481ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 31,920ಕ್ಕೆ ಏರಿದೆ.
ಇದೇ ಸಮಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡು 27,299 ಜನರು ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಗುಣಮುಖಿತರ ಸಂಖ್ಯೆ 24,36,716ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,38,824ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 1992 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 11,488 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 199 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಗಳ ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

07-06-2021 HMB Kannada (1)

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 9ವರೆಗೂ ಭಾರಿ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement