ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸದಸ್ಯ ಹಾಗೂ ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ (94) ಇಂದು (ಸೋಮವಾರ) ಬೆಳಗ್ಗೆ ಗಂಗಾನಗರ ನಿವಾಸದಲ್ಲಿ ನಿಧನರಾಗಿದ್ದಾರೆ.
ಕೆಲದಿನಗಳಿಂದ ಅವರು ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತಗೊಂಡಿದ್ದರು. 2013ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದರು.
2008ರಲ್ಲಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಅವರು ಬಳಿಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ನಂತರ ಕಾಂಗ್ರೆಸ್‌ ಸೇರಿದ್ದರೂ 2015ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅಸಮಾಧಾನ ಹೊರಹಾಕಿ, ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡುತ್ತಿಲ್ಲ ಎಂದು ಹೇಳಿ ಕಾಂಗ್ರೆಸ್‌ ಪಕ್ಷವನ್ನು ತೊರೆದಿದ್ದರು.
. ಇವರಿಗೆ ಸಾಹಿತ್ಯ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ 2012ರಲ್ಲಿ ದಸರಾ ಪ್ರಶಸ್ತಿ, 2002ರಲ್ಲಿ ಭಾರತ ರತ್ನ ಡಾ. ಬಿ. ಆರ್‍. ಅಂಬೇಡ್ಕರ್ ಪ್ರಶಸ್ತಿ, ಶ್ರೀ ಜಿ. ನಾರಾಯಣ ಕುಮಾರ್‌ ಸಂಸ್ಥೆಯಿಂದ ಸಮಾಜ ಸೇವೆಗಾಗಿ 1993ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳು ಸಂದಿವೆ

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement