ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ನಿರ್ಧಾರಗಳ ವಿರುದ್ಧ ಪ್ರಧಾನಿಗೆ 93 ನಿವೃತ್ತ ಅಧಿಕಾರಿಗಳ ಸಹಿಯುಳ್ಳ ಪತ್ರ

ಕೊಚ್ಚಿ: ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ವಿವಾದಾತ್ಮಕ ನಿರ್ಧಾರಗಳ ವಿರುದ್ಧ ದೇಶದ 93 ನಿವೃತ್ತ ಅಧಿಕಾರಿಗಳು ಸಹಿಯನ್ನು ಕ್ರೂಢೀಕರಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆಯಲಾಗಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಆತಂಕಕಾರಿ ಬೆಳವಣಿಗೆಗಳ ವಿರುದ್ಧ ಹಿರಿಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಲಕ್ಷದ್ವೀಪ ಪ್ರಜೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೊಸ ನಿಯಮಗಳನ್ನು ರೂಪಿಸಲಾಗುತ್ತಿದೆ.ಪ್ರಪುಲ್ ಪಟೇಲ್ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅಧಿಕಾರಿಗಳು ದೂಷಿಸಿದ್ದಾರೆ.
ಲಕ್ಷದ್ವೀಪದ ಪರಿಸರ ಮತ್ತು ಸಮಾಜದಲ್ಲಿ ಚಾಲ್ತಿಯಲ್ಲಿ ಇರುವ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದ. ಆಡಳಿತಾಧಿಕಾರಿ ರೂಪಿಸಿರುವ ಪ್ರತಿ ನಿರ್ಣಯಗಳು ಅಭಿವೃದ್ಧಿಗೆ ಪೂರಕವಾಗಿಲ್ಲ, ಬದಲಿಗೆ ನಿರಂಕುಶ ಪ್ರಭುತ್ವದ ಸಂಕೇತದಂತೆ ಗೋಚರಿಸುತ್ತಿವೆ ಎಂದು ಪತ್ರದಲ್ಲಿ ಹೇಳಲಾಗಿದೆ.
ಲಕ್ಷದ್ವೀಪದಲ್ಲಿ ವಿವಾದಕ್ಕೆ ಕಾರಣವಾಗಿರುವ ನಿರ್ಧಾರಗಳನ್ನು ವಾಪಸ್ ಪಡೆಯುವಂತೆ 93 ನಿವೃತ್ತ ಅಧಿಕಾರಿಗಳ ಸಹಿ ಸಂಗ್ರಹಿಸಿದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಿ ಕೊಡಲಾಗಿದೆ. ಪ್ರಜೆಗಳಿಗೆ ಸ್ಪಂದಿಸುವ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ. ಇದರ ಮಧ್ಯೆ ಇನ್ನೊಂದು ದಿಕ್ಕಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ವಿರುದ್ಧ ಅಭಿಯಾನ ಆರಂಭವಾಗಿದೆ. ಲಕ್ಷದ್ವೀಪ ಉಳಿಸಿ ಅಭಿಯಾನವನ್ನು ನಡೆಸಲಾಗುತ್ತಿದೆ.

ಪ್ರಮುಖ ಸುದ್ದಿ :-   ದೇಶಾದ್ಯಂತ ಬಹುಚರ್ಚಿತ ನಿಠಾರಿ ಹತ್ಯಾಕಾಂಡ ಪ್ರಕರಣದಲ್ಲಿ ಖುಲಾಸೆಯಾಗಿದ್ದ ಸುರಿಂದರ ಕೋಲಿ ಆತ್ಮಹತ್ಯೆ

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement