ಸಿಎಂ ಬದಲಾವಣೆ ವಿಚಾರ: ಪರ-ವಿರೋಧ ಸಹಿ ಸಂಗ್ರಹ ಮಾಡಬೇಡಿ:ಶಾಸಕರಿಗೆ ಸಿಎಂ ಬಿಎಸ್‌ವೈ ಖಡಕ್‌ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಗಂಭೀರ ಸ್ವರೂಪಕ್ಕೆ ತಿರುಗುತ್ತಿದ್ದು ಇದರ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಠಿಣ ಸಂದೇಶವೊಂದನ್ನು ರವಾನಿಸಿದ್ದಾರೆ.
ಒಂದೆಂಡೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಕೆಲ ಬಿಜೆಪಿ ನಾಯಕರು ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದರೆ ಇದಕ್ಕೆ ಪ್ರತಿಯಾಗಿ ಯಡಿಯೂರಪ್ಪನವರ ಪರ ಇರುವವರು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಇದೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಯಡಿಯೂರಪ್ಪ ಸದ್ಯ ಶಾಸಕರಿಗೆ ಖಡಕ್‌ ಸಂದೇಶ ರವಾನಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡಬಾರದು, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement