ನವಜಾತ ಶಿಶುವಿಗೆ ಬ್ಲ್ಯಾಕ್ ಫಂಗಸ್​: ಶಸ್ತ್ರ ಚಿಕಿತ್ಸೆ ಯಶಸ್ವಿ

ಆಗ್ರಾ: ನಗರದ ಸರೋಜಿನಿ ನಾಯ್ಡು ಮೆಡಿಕಲ್ ಕಾಲೇಜಿನ ವೈದ್ಯರು ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದ್ದ ನವಜಾತ ಶಿಶುವಿನ ಶಸ್ತ್ರಚಿಕಿತ್ಸೆಯನ್ನು ಸೋಮವಾರ ಯಶಸ್ವಿಯಾಗಿ ಮಾಡಿ, ಮಗುವಿನ ಜೀವ ಉಳಿಸಿದ್ದಾರೆ.
14 ದಿನಗಳ ಹೆಣ್ಣುಮಗುವಿನ ಎಡ ಕೆನ್ನೆಯ ಮೇಲೆ ಕಪ್ಪು ಮಚ್ಚೆ ಮತ್ತು ಕೀವು ಕಾಣಿಸಿಕೊಂಡಿತ್ತು. ಶನಿವಾರ ಸಂಜೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಈ ಸೋಂಕನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು ಎಂದು ಕಿವಿ ಮೂಗು ಮತ್ತು ಗಂಟಲು ರೋಗಗಳ ವಿಭಾಗದ ಮುಖ್ಯಸ್ಥ ಡಾ.ಅಖಿಲೇಶ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಶಿಶುವನ್ನು ಆಸ್ಪತ್ರೆಗೆ ದಾಖಲಿಸಿದಾಗ ಅದಕ್ಕೆ ಕಿಡ್ನಿ ಮತ್ತು ಹೃದಯದ ಸಮಸ್ಯೆ ಕಾಣಿಸಿಕೊಂಡಿತ್ತು. ತೂಕವೂ ಕಡಿಮೆಯಿತ್ತು. ಆದರೆ ಕೊವಿಡ್-19ರ ಲಕ್ಷಣಗಳಿರಲಿಲ್ಲ. ಮಗುವಿಗೆ ಶಸ್ತ್ರ ಚಿಕಿತ್ಸೆ ಮಾಡಿದ ನಂತರ ಈಗ ಪ್ರಾಣಾಪಾಯದಿಂದ ಪಾರಾಗಿದೆ. ಚಿಕ್ಕಮಕ್ಕಳ ಐಸಿಯುಗೆ ಮಗುವನ್ನು ದಾಖಲಿಸಲಾಗಿದೆ. ಅಲ್ಲಿ ಮಗುವನ್ನು ನಿಗಾದಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದರು.
ಈವರೆಗೆ ಸರೋಜಿನಿ ನಾಯ್ಡು ಆಸ್ಪತ್ರೆಯಲ್ಲಿ ಬ್ಲ್ಯಾಕ್​ ಫಂಗಸ್​ನಿಂದ ಒಂದು ಸಾವು ಸಂಭವಿಸಿದೆ. ಇತರ ನಾಲ್ವರು ಶಂಕಿತ ಸೋಂಕಿನಿಂದ ಮೃತಪಟ್ಟಿದ್ದಾರೆ. ಈಗ ಬ್ಲ್ಯಾಕ್​ ಫಂಗಸ್​ ಸೋಂಕಿನಿಂದ ಬಳಲುತ್ತಿರುವ 32 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement