ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಜೋರು, ಉಳಿದೆಡೆ ಸಾಧಾರಣ

ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಮುಂಗಾರು ಮಳೆಯ ಶುರುವಾಗಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಮಂಗಳವಾರ(ಜೂನ್‌8ರಿಂದ) ಜೂನ್ 11ರ ವರೆಗೆ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು (ಸೋಮವಾರ) ಮತ್ತು ನಾಳೆ ಸಾಮಾನ್ಯ ಮಳೆ ಸುರಿಯಲಿದ್ದು, ಜೂನ್ 10 ಮತ್ತು 11ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಸೋಮವಾರ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡಿನಲ್ಲೂ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಮಳೆ ಬೀಳಲಿದೆ.
ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಉಳಿದೆಡೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.
ಜೂನ್ 5ರಂದು ಕರ್ನಾಟಕಕ್ಕೆ ಮುಂಗಾರಿನ ಪ್ರವೇಶವಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಮಾಹೆ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವರ್ಷ ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ

ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement