ಕರ್ನಾಟಕದಲ್ಲಿ 10 ಸಾವಿರಕ್ಕಿಂತ ಕಡಿಮೆ ಬಂದ ಕೊರೊನಾ ದೈನಂದಿನ ಸೋಂಕು, ಸಾವಿನಲ್ಲೂ ಇಳಿಕೆ..!

ಬೆಂಗಳೂರು :ಕರ್ನಾಟಕದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ (ಮಂಗಳವಾರ) 9808 ಜನರಿಗೆ ಸೋಂಕು ತಗುಲಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 179 ಸೋಂಕಿತರು ಮೃತಪಟ್ಟಿದ್ದಾರೆ, ಇದುವರೆಗೆ 32,099 ಸೋಂಕಿತರು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 23449 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 2460,165 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 2,25,004ಕ್ಕೆ ಸಕ್ರಿಯ ಪ್ರಕರಣಗಳು ಕುಸಿದಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 2028 ಜನರಿಗೆ ಸೋಂಕು ತಗುಲಿದೆ. 7664 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಕೊರೊನಾ ಸೋಂಕಿಗೆ 44 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 15118 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

08-06-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement