
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕಿತರ ಮತ್ತೆ 10 ಸಾವಿರದ ಗಡಿ ದಾಟಿದೆ. ಬುಧವಾರ 10,959 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 192 ಜನರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 27,28,248ಕ್ಕೆ ಏರಿಕೆಯಾಗಿದ್ದು, 24,80,411 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 32,291 ಜನರು ಮೃತಪಟ್ಟಿದ್ದಾರೆ. 2,15,525 ಸಕ್ರಿಯಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಬುಧವಾರ 2395 ಜನರಿಗೆ ಸೋಂಕು ದೃಢಪಟ್ಟಿದೆ.ಸೋಂಕಿಗೆ 50 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,89.541ಕ್ಕೆ ಏರಿಕೆಯಾಗಿದೆ. ಈ ಪೈಕಿ 10,76,247 ಜನರು ಗುಣಮುಖರಾಗಿದ್ದಾರೆ. ಮೃತಪಟ್ಟವರ ಒಟ್ಟು ಸಂಖ್ಯೆ 15,168ಕ್ಕೆ ಏರಿಕೆಯಾಗಿದೆ. 98,125 ಸಕ್ರಿಯ ಪ್ರಕರಣಗಳಿವೆ.



ನಿಮ್ಮ ಕಾಮೆಂಟ್ ಬರೆಯಿರಿ