ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ದೂರು ನೀಡಿದ್ದಾರೆ.
ಆಪ್ತ ಸಹಾಯಕ ಫಾರೂಕ್ ಮೂಲಕ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸದಾಶಿವ ನಗರದ ಗೆಸ್ಟ್ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.
ಸದಾಶಿವ ನಗರದ ಗೆಸ್ಟ್ಹೌಸ್ಗೆ ಗನ್ಮ್ಯಾನ್ಗಳು ಪ್ರವೇಶ ಮಾಡಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಗನ್ಮ್ಯಾನ್ಗಳು ಬೀಗ ಮುರಿದು ಒಳನುಗ್ಗಿದ್ದಾರೆ. ಗೆಸ್ಟ್ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂಬ ಕಾರಣಕ್ಕೆ ದೂರು ನೀಡಲಾಗಿದೆ.
ಸದಾಶಿವನಗರದ ಗೆಸ್ಟ್ಹೌಸ್ ತೆರವು ಮಾಡಿದ್ದರು. ಕುಮಾರಸ್ವಾಮಿಗೆ ಸೇರಿದ ಅಗತ್ಯ ವಸ್ತುಗಳು ಅಲ್ಲಿದ್ದವು. ಗೆಸ್ಟ್ಹೌಸ್ ಕೀಲಿ ಶಾಸಕ ಜಮೀರ್ ಅಹ್ಮದ್ ಬಳಿಯಿತ್ತು. ಜಮೀರ್ಗೆ ಭೋಜೇಗೌಡ ಕರೆ ಮಾಡಿ ಎರಡು ದಿನ ಕಾಲಾವಕಾಶ ಕೇಳಿದ್ದರು ಎನ್ನಲಾಗಿದೆ.
ಈ ನಡುವೆ ಕುಮಅರಸ್ವಮಿ ಹಾಗೂ ಜಮೀರ್ ಅಹಮ್ಮದ್ ಮಧ್ಯೆ ತಿಕ್ಕಾಟ ಜೋರಾಗಿದೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಗನ್ ಮ್ಯಾನ್ ಬೀಗ ಮುರಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮೊದಲ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜಮೀರ್ ಬಹಳ ಆಪ್ತರಾಗಿದ್ದರು ಆಗ ಈ ಗೆಸ್ಟ್ ಹೌಸನ್ನು ಕುಮಾರಸ್ವಾಮಿಯವರಿಗೆ ಬಿಟ್ಟುಕೊಟ್ಟಿದ್ದರು. ಆದರೆ ಕುಮಾರಸ್ವಾಮಿ ಮತ್ತು ಜಮೀರ್ ಅವರ ನಡುವೆ ಬಿರುಕು ಬಿಟ್ಟು ಈಗ ಅದು ಇಲ್ಲಿವರೆಗೆ ಬಂದು ನಿಂತಿದೆ.


ನಿಮ್ಮ ಕಾಮೆಂಟ್ ಬರೆಯಿರಿ