ಕರ್ನಾಟಕದಲ್ಲಿ ಗುರುವಾರ 11 ಸಾವಿರ ದೈನಂದಿನ ಕೊರೊನಾ ಸೋಂಕು

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾನಾ ಇಳಿಮುಖದತ್ತ ಸಾಗಿದ್ದು, ಗುರುವಾರ ಹೊಸದಾಗಿ 11,042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,39,290ಕ್ಕೆ ಏರಿಕೆಯಾಗಿದೆ.
15,721 ಸೋಂಕಿತರು ಇದೇ ಸಮಯದಲ್ಲಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2496132ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ 194 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 32485 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 210652 ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ. 6.58 ರಷ್ಟಿದ್ದು, ಮರಣ ಪ್ರಮಾಣ ಶೇ. 1.75 ರಷ್ಟಿದೆ.
ಬೆಂಗಳೂರಿನಲ್ಲಿ 2191 ಪ್ರಕರಣಗಳು ದೃಢಪಟ್ಟಿದ್ದು, 47 ಸೋಂಕಿತರು ಮೃತಪಟ್ಟಿದ್ದಾರೆ. 4846 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಗಳನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

10-06-2021 HMB Kannada

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ