ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ

ಭಟ್ಕಳ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ರಾಷ್ಟ್ರೀಯತೆ ಹೊಂದಿದ ಮಹಿಳೆಯೋಬ್ಬರನ್ನು ಬಂಧಿಸಿದ್ದಾರೆ.
ಪಾಕಿಸ್ತಾನದ ಖತೀಜಾ ಮೆಹರಿನ್ ಎಂಬಾಕೆಯೇ ಬಂಧಿತ ಮಹಿಳೆ. ಭಟ್ಕಳದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತನ ಜತೆ ದುಬೈನಲ್ಲಿ ವಿವಾಹವಾಗಿದ್ದ ಈಕೆ 2014ರಲ್ಲಿ ಮೂರು ತಿಂಗಳ ವಿಸಿಟಿಂಗ್ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಇವಳು 2015ರಲ್ಲಿ ಕಳ್ಳ ಮಾರ್ಗ ಅನುಸರಿಸಿ ಭಾರತ ಪ್ರವೇಶಿದ್ದಳು.
ಭಟ್ಕಳದಲ್ಲಿ ಈಕೆ ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಶನ್ ಕಾರ್ಡ್, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದುಕೊಂಡಿದ್ದಾಳೆ. ಪೊಲೀಸರುಈ ದಾಖಲೆಗಳನ್ನು ಕೂಡ ವಶಡಿಸಿಕೊಂಡಿದ್ದಾರೆ.ಮೂರು ಮಕ್ಕಳೊಂದಿಗೆ ಭಟ್ಕಳದಲ್ಲೇ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನದ ಮಹಿಳೆಯನ್ನು ಬಂಧಿಸಿರುವ ಭಟ್ಕಳದ ಟೌನ್ ಪೊಲೀಸರು ಮಹಿಳೆ ವಿರುದ್ಧ ಸೆಕ್ಷನ್ 468, 471ರಡಿ ಪ್ರಕರಣ ದಾಖಲಿಸಿದ್ದಾರೆ.
ಈಕೆಯ ಮೇಲೆ ವಿದೇಶಿ ಕಾಯಿದೆ ಉಲ್ಲಂಘನೆ ಮತ್ತು ಇತರೆ ಐಪಿಸಿ ಪ್ರಕರಣಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈಕೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಎಸ್ ಪಿ ಶಿವಪ್ರಕಾಶ್ ದೇವರಾಜು, ಎಎಸ್ ಪಿ ಬದರಿನಾಥ, ಭಟ್ಕಳ ಡಿವೈಎಸ್ ಪಿ ಬೆಳ್ಳಿಯಪ್ಪ ಕೆ.ಯು. ಹಾಗೂ ಸಿಪಿಐ ದಿವಾಕರ ಪಿ.ಎಮ್ ಅವರ ಮಾರ್ಗದರ್ಶನ ಹಾಗೂ ಸೂಚನೆಯ ಮೇರೆಗೆ ಭಟ್ಕಳ ನಗರ ಪೊಲೀಸ್ ಠಾಣಿಯ ಪಿಎಸ್‌ಐ ಸುಮಾ ಬಿ. ಮತ್ತು ಸಿಬ್ಬಂದಿ ನಾರಾಯಣ ನಾಯ್ಕ, ಮುಗ್ದುಂ ಪತ್ತೆಖಾನ್, ಲೋಕಪ್ಪ ಪತ್ತಿ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಹೀನಾ ಎಫ್.ಪಾಲ್ಗೊಂಡಿದ್ದರು.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement