ಮಹತ್ವದ ಸುದ್ದಿ…11 ಜಿಲ್ಲೆಗಳಲ್ಲಿ ಲಾಕ್​ಡೌನ್ ವಿಸ್ತರಣೆ; ಉಳಿದ ಜಿಲ್ಲೆಗಳಲ್ಲಿ 14ರಿಂದ ಅನ್​ಲಾಕ್, ಆದರೆ ಕೆಲವೇ ನಿಯಮಗಳು ಸಡಿಲ

ಲಾಕ್‌ಡೌನ್‌ ಸಡಿಲ ಮಾಡಿದ ಜಿಲ್ಲೆಗಳಲ್ಲಿ ಯಾವ್ಯಾವುದ್ನು ಅನುಮತಿಸಲಾಗುತ್ತದೆ

* ಅಗತ್ಯ ಮಳಿಗೆಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ತೆರೆದಿರುತ್ತವೆ. (ಬೆಳಿಗ್ಗೆ 10 ರಿಂದ ವಿಸ್ತರಿಸಲಾಗಿದೆ)
* ವಾಕಿಂಗ್‌ಗಾಗಿ ಬೆಳಿಗ್ಗೆ 5 ರಿಂದ ಬೆಳಿಗ್ಗೆ 10ರ ವರೆಗೆ ಉದ್ಯಾನಗಳು ತೆರೆದಿರುತ್ತವೆ
* ಬೀದಿಬದಿ ವ್ಯಾಪಾರಸ್ಥರಗೆ ಮಾರಾಟಗಾರರಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ತೆರೆಯಲು ಅವಕಾಶವಿರುತ್ತದೆ
* ಆಟೋ ಮತ್ತು ಟ್ಯಾಕ್ಸಿಗಳು ಲಭ್ಯವಿರುತ್ತವೆ ಮತ್ತು ಒಂದು ಸಮಯದಲ್ಲಿ ಇಬ್ಬರು ಮಾತ್ರ ಪ್ರಯಾಣಿಸಬಹುದು
* ಕಾರ್ಖಾನೆಗಳು 50% ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿಸಲಾಗುವುದು, ಆದರೆ ಉಡುಪು ಉದ್ಯಮವು 30% ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬಹುದು.

ಬೆಂಗಳೂರು :ಏಪ್ರಿಲ್ 27 ರಿಂದ ಲಾಕ್ ಡೌನ್ ಆಗಿರುವ ರಾಜ್ಯವು ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆಗೆ ಹೋಗಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಘೋಷಿಸಿದರು. ಅನೇಕ ಕರ್ನಾಟಕ ಜಿಲ್ಲೆಗಳಲ್ಲಿ ಕೋವಿಡ್‌ -19 ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಈ ನಿರ್ಧಾರ ಬಂದಿದೆ.  ಎಲ್ಲ ಜಿಲ್ಲೆಗಳಲ್ಲಿ ಸಂಜೆ 7 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಸ್ಥಳಗಳಲ್ಲಿ ಶುಕ್ರವಾರ ಸಂಜೆ 7 ರಿಂದ ಬೆಳಿಗ್ಗೆ 5 ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗದ ಹಿನ್ನೆಲೆಯಲ್ಲಿ ಈ 11 ಜಿಲ್ಲೆಗಳಲ್ಲಿ ಜೂನ್ 14 ರಿಂದ ಜೂನ್ 21 ರವರೆಗೆ ಲಾಕ್ ಡೌನ್ ಮುಂದುವರೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ .

ವೀಕೇಂಡ್‌ ಕರ್ಫ್ಯೂ ಎಲ್ಲ ಜಿಲ್ಲೆಗಳಲ್ಲಿ ಜಾರಿಯಲ್ಲಿರುತ್ತದೆ. ಶುಕ್ರವಾರ ಸಂಜೆ  7ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ಯಾರೂ ಹೊರಬರುವಂತಿಲ್ಲ. ಓಡಾಡುವಂತಿಲ್ಲ ಎಂದು ತಿಳಿಸಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಗುರುವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ,ಸಚಿವರು, ಜಿಲ್ಲಾಧಿಕಾರಿ, ಅಧಿಕಾರಿಗಳೊಂದಿಗೆ ಮಹತ್ವದ ಲಾಕ್ ಡೌನ್ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಿದ್ದಾರೆ.
ದಾವಣಗೆರೆ, ದಕ್ಷಿಣ ಕನ್ನಡ, ಮೈಸೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಕೊಡಗು, ಮಂಡ್ಯ, ಚಿಕ್ಕಮಗಳೂರು, ಹಾಸನ, ಬೆಳಗಾವಿ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ. ಹೀಗಾಗಿ ಈ ಜಿಲ್ಲೆಗಳಲ್ಲಿ ಜೂನ್ 14 ರಿಂದ ಜೂನ್ 21 ರ ವರೆಗೆ ಒಂದು ವಾರ ಲಾಕ್ ಡೌನ್ ಮುಂದುವರೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಜಿಲ್ಲೆಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ, ಈಗಿರುವ ಮಾರ್ಗಸೂಚಿಯೇ ಮುಂದುವರೆಯಲಿದೆ, ಉಳಿದ ಜಿಲ್ಲೆಗಳಲ್ಲಿ ಕೆಲವು ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಉಳಿದ ಜಿಲ್ಲೆಗಳಲ್ಲಿ ದಿನಾಂಕ 21-06-2021ರ ವರೆಗೆ ಎಲ್ಲ ಕಾರ್ಖಾನೆಗಳನ್ನು ಶೇ.50ರಷ್ಟು ಸಿಬ್ಬಂದಿಗಳೊಂದಿಗೆ ಕೆಲಸಕ್ಕೆ ಅವಕಾಶ. ಗಾರ್ಮೆಟ್ಸ್ ಗಳಲ್ಲಿ ಶೇ.30ರಷ್ಟು ನೌಕರರಿಗೆ ಕೆಲಸ ಮಾಡಲು ಅವಕಾಶ.ಹೊಟೇಲ್‌, ಹಾಗೂ ಮದ್ಯದ ಅಂಗಡಿ ಪಾರ್ಸೆಲ್‌ಗಳಿಗೆ ಹಾಗೂ ದಿನಸಿ ಅಂಗಡಿಗಳಿಗೆ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಎಲ್ಲಾ ನಿರ್ಮಾಣ ಚಟುವಟಿಕೆ ಪ್ರಾರಂಭಿಸಲು ಆವಕಾಶ. ಇಂತಹ ಅಂಗಡಿ ತೆರೆಯಲು ಅವಕಾಶ. ಪಾರ್ಕ್ ಬೆಳಿಗ್ಗೆ 5 ರಿಂದ 10ರ ವರೆಗೆ ತೆರೆಯಲು ಅವಕಾಶ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ 2ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಸಿಮೆಂಟ್‌ ಹಾಗೂ ಸ್ಟೀಲ್‌ ಹಾಗೂ ಕಟ್ಟಡ ಕಾಮಗಾರಿ ಸಾಮಗ್ರಿ ಅಂಗಡಿಗಳಿಗೆ ಅವಕಾಶ ನೀಡಲಾಗಿದೆ.  ಆಟೋ ಹಾಗು ಟ್ಯಾಕ್ಸಿ ಸಂಚಾರಕ್ಕೆ ಇಬ್ಬರು  ಮಾತ್ರ  ತೆರಳಲು ಅವಕಾಶ ನೀಡಲಾಗಿದೆ ಎಂದರು.

ಕೋವಿಡ್ ಕರ್ಪ್ಯೂ ರಾತ್ರಿ 7 ರಿಂದ ಬೆಳಿಗ್ಗೆ 5 ಜಾರಿಯಲ್ಲಿರಲಿದೆ. ವಾರಾಂತ್ಯ ಕರ್ಪೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ. ಅನ್ ಲಾಕ್ ಜಾರಿಗೊಳಿಸಿದರೂ, ಬಿಎಂಟಿಸಿ, ಸಾರಿಗೆ ಬಸ್ ಸಂಚಾರ ಆರಂಭಿಸುವುದಿಲ್ಲ. ಹಾಗೂ ಮೆಟ್ರೋ ಸಂಚಾರ ಇರುವುದಿಲ್ಲ.  ಕೆಲವು ಸರ್ಕಾರಿ ಕಚೇರಿಗಳಿಗೆ ಶೇ.50ರಷ್ಟು ನೌಕರರೊಂದಿಗೆ ತೆರೆಯೋದಕ್ಕೆ ಅವಕಾಶ ನೀಡಲಾಗಿದೆ. ಅಂತರ ಜಿಲ್ಲಾ  ಹಾಗೂ ಅಂತಾರಾಜ್ಓಯ ಡಾಟಕ್ಕೂ ಅವಕಾಶ ನೀಡಲಾಗಿದೆ. ಆದರೆ ಕರ್ಫ್ಯೂ ಸಮಸಯದಲ್ಲಿ ಓಡಾಟಕ್ಕೆ ಅವಕಾಶ ಇರುವುದಿಲ್ಲ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

ರಾಜ್ಯದ ಈ 11 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 11 ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್ ಮುಂದುವರೆಸಲು ಸೂಚಿಸಿದ್ದಾರೆ. ಆ ಜಿಲ್ಲೆಗಳಲ್ಲಿ ಜನರು ಕೋವಿಡ್ ನಿಯಮ ಉಲ್ಲಂಘಿಸಿದಂತೆ ಕ್ರಮಕೈಗೊಳ್ಳಿ ಎಂದು ಯಡಿಯೂರಪ್ಪ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಿದ್ದಾರೆ.
11 ಜಿಲ್ಲೆಗಳಲ್ಲಿ ಲಾಕ್ ಡೌನ್ ಜೂನ್ 21ರವರೆಗೆ ಮುಂದುವರೆಯಲಿದೆ. ಇತರೆ ಜಿಲ್ಲೆಗಳಲ್ಲಿ ಅನ್ ಲಾಕ್ ಸಡಿಲ ಮಾಡಿ ಜಾರಿಗೊಳಿಸಲಾಗುತ್ತಿದೆ. ಅದರೆ ಕರ್ಪ್ಯೂ ಮುಂದುವರೆಯಲಿದೆ. ಕಾರ್ಖಾನೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೋವಿಡ್‌-19 ಸೂಕ್ತ ನಡವಳಿಕೆಯನ್ನು ಸಾರ್ವಜನಿಕವಾಗಿ ಅನುಸರಿಸಬೇಕು. “ಪರಿಸ್ಥಿತಿ ಸುಧಾರಿಸಿದರೆ, ನಾವು ಹೆಚ್ಚಿನ ಸಡಿಲಗಳನ್ನು ಮಾಡಬಹುದು ಎಮದು ಯಡಿಯೂರಪ್ಪ ಹೇಳಿದ್ದಾರೆ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement