ರಾಜ್ಯದಲ್ಲಿ ಸಿಎಂ ಬಿಎಸ್‌ವೈ ಬದಲಾವಣೆ ಇಲ್ಲ: ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ ಬಿಜೆಪಿ ಸರ್ಕಾರದಲ್ಲಿ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ಕುರಿತಾದ ವಿವಾದಕ್ಕೆ ಬಿಜೆಪಿ ದೆಹಲಿ ಹೈಕಮಾಂಡ್‌ ತೆರೆ ಎಳೆದಿದ್ದು, ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟಿವಿ-9 ವರದಿ ಮಾಡಿದೆ.
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಎಂಬುದು ಊಹಅಪೋಹ ಎಂದು ಹೇಳಿರುವ ಅರುಣ್ ಸಿಂಗ್ ರಾಜ್ಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ದಿಢೀರ್​ ಬೆಳವಣಿಗೆಯಲ್ಲಿ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಕಳೆದ ವಾರ ವಿಧಾನಸೌಧದಲ್ಲಿ ಹೇಳಿದ್ದರು. ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತಾರೋ, ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲಕ್ಕೆ ಕಾರಣರಾಗಿದ್ದರು.
ರಾಜೀನಾಮೆ ನೀಡಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಆದರೆ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿದೆ. ಪರ್ಯಾಯ ನಾಯಕ ಇಲ್ಲವೆಂಬ ಮಾತನ್ನು ನಾನು ಒಪ್ಪುವುದಿಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದ್ದರು.
ನಾನು ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡುವುದಿಲ್ಲ. ನನ್ನ ಮೇಲೆ ಹೈಕಮಾಂಡ್‌ಗೆ ವಿಶ್ವಾಸವಿರುವವರೆಗೆ ಇರುತ್ತೇನೆ. ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುತ್ತೇನೆ. ಯಡಿಯೂರಪ್ಪ ನೀವು ಬೇಡ ಎಂದು ಹೇಳಿದರೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದು ಬಿಜೆಪಿಯಲ್ಲಿ ಭಾರೀ ಸಂಚನಕ್ಕೆ ಕಾರಣವಾಗಿತ್ತು. ಈಗ ಹೈಕಮಾಂಡ್‌ ಇದಕ್ಕೆ ಸದ್ಯದ ಮಟ್ಟಿಗೆ ತೆರೆ ಎಳೆದಿದೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement