ಕರ್ನಾಟಕದಲ್ಲಿ ದೈನಂದಿನ ಕೊರೊನಾ ಪ್ರಕರಣ ಮತ್ತಷ್ಟು ಇಳಿಕೆ

ಬೆಂಗಳೂರು:ಕರ್ನಾಟಕದಲ್ಲಿ ಶುಕ್ರವಾರ 8,249 ಹೊಸ ಕೊರೊನಾ ಸೋಂಕು ವರದಿಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 27,47,539ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 159 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 32,644ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇದೇ ಸಮಯದಲ್ಲಿ ಸೋಂಕಿತರು ಚೇತರಿಸಿಕೊಂಡು 14,975 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 25,11,105ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 2,03,769 ಸಕ್ರಿಯಯ ಪ್ರಕರಣಗಳಿಗೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಶುಕ್ರವಾರ 1,154 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,92,886ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 48 ಮಂದಿ ಮೃತಪಟ್ಟದ್ದಾರೆ.
ರಾಜ್ಯಾದ್ಯಂತ ಶುಕ್ರವಾರ 1,69,695 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 8,249 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 4.86ಕ್ಕೆ ಕುಸಿದಿದೆ.
ಕಳೆದ 24 ತಾಸಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಪೈಕಿ ಬೆಂಗಳೂರು ನಗರದಲ್ಲಿ 48, ಗ್ರಾಮಾಂತರದಲ್ಲಿ 6, ಶಿವಮೊಗ್ಗ 7, ಹಾವೇರಿ 10, ಧಾರವಾಡದಲ್ಲಿ 9, ಮೈಸೂರಿನಲ್ಲಿ 20 ಪ್ರಕರಣಗಳು ಸೇರಿವೆ.
ಎಲ್ಲ ಜಿಲ್ಲೆಗಳ ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

11-06-2021 HMB Kannada

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement