ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಒಂದು ವಾರ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ (ಶುಕ್ರವಾರದಿಂದ) ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ (ಶುಕ್ರವಾರದಿಂದ) ಒಂದು ವಾರಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ತೀವ್ರಗೊಳ್ಳಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮೂರು ದಿನಗಳ ಕಾಲ ಅಂದರೆ ಜೂನ್ 13ರವರೆಗೆ ಭಾರೀ ಮಳೆಯಾಗಲಿದೆ. ಅದಾದ ಬಳಿಕವೂ ಮೂರ್ನಾಲ್ಕು ದಿನ ಮಳೆ ಮುಂದುವರೆಯಲಿದೆ. ಇಂದಿನಿಂದ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಜೂನ್ 14ರಂದು ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 1 ವಾರಗಳ ಕಾಲ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇಂದಿನಿಂದ 1 ವಾರ ಮಳೆಯಾಗಲಿದೆ. ಹೀಗಾಗಿ, ಹಳದಿ ಅಲರ್ಟ್​ ಘೋಷಿಸಲಾಗಿದೆ.
ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇಂದಿನಿಂದ ಜೂನ್ 15ರ ವರೆಗೆ ಕೇರಳದಲ್ಲೂ ಭಾರೀ ಮಳೆಯಾಗಲಿದೆ. ರಾಜಸ್ಥಾನ, ಮಹಾರಾಷ್ಟ್ರ ಭಾಗದಲ್ಲೂ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ.
ಜೂನ್​ನಿಂದ ಸೆಪ್ಟೆಂಬರ್​ ವರೆಗೆ ಮಳೆಯ ಆರ್ಭಟವಿರಲಿದೆ. ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement