ಕೊರೊನಾ ಸೋಂಕಿನಿಂದ ಕವಿ, ಖ್ಯಾತ ಸಾಹಿತಿ ಡಾ. ಸಿದ್ದಲಿಂಗಯ್ಯ ನಿಧನ

ಬೆಂಗಳೂರು: ಕೊರೊನಾ​ ಸೋಂಕಿಗೆ ಕವಿ, ಖ್ಯಾತ ಸಾಹಿತಿ ಡಾ.ಸಿದ್ದಲಿಂಗಯ್ಯ ( 67 ವರ್ಷ) ನಿಧನರಾಗಿದ್ದಾರೆ.

ಸೋಂಕಿಗೆ ತುತ್ತಾಗಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ನಿಮೋನಿಯಾ ತೀವ್ರಾಗಿದ್ದ ಹಿನ್ನಲೆ ಅವರು ಆರೋಗ್ಯ ಸ್ಥಿತಿ ಬಿಗಾಡಾಯಿಸಿದ್ದು, ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗುವ ಮುನ್ನ ಬೆಡ್​ ಸಿಗದೇ ಪರದಾಡಿದ್ದರು. ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಡಿಸಿಎಂ ಅಶ್ವತ್ಥ್​ ನಾರಾಯಣ್​ ಅವರು ಅವರಿಗೆ ಬೆಡ್​ ವ್ಯವಸ್ಥೆ ಮಾಡಿದ್ದರು.
ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

1954ರಲ್ಲಿ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ ಜನಿಸಿದ್ದರು.

ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಅವರು, ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದರು. ಎರಡು ಸಲ ವಿಧಾನಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಇವರ ಸಲ್ಲಿಸಿರುವ ಸೇವೆ ಅಪಾರ. ಶ್ರವಣಬೆಳಗೊಳದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 1954ರಲ್ಲಿ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ ಜನಿಸಿದ್ದರು.
ಡಾ.ಸಿದ್ದಲಿಂಗಯ್ಯ ಅವರು, ಡಾ.ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದರು. ಆಕರ್ಷಿತರಾದವರು. ಶಾಲಾ ದಿನಗಳಿಂದಲೇ ಕವಿತೆ ಬರೆಯುವ ಹವ್ಯಾಸವುಳ್ಳವಾಗಿದ್ದ ಇವರು, ಅಂದಿನಿಂದಲೇ ಉತ್ತಮ ಭಾಷಣಕಾರರೂ ಆಗಿದ್ದರು.
ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ.
ಡಾ.ಸಿದ್ದಲಿಂಗಯ್ಯ ಅವರ ಹೆಸರನ್ನು ಉಲ್ಲೇಖಿಸದೇ ಕನ್ನಡದ ಬಂಡಾಯ ಸಾಹಿತ್ಯದ ಇತಿಹಾಸ ಬರೆಯಲು ಸಾಧ್ಯವಿಲ್ಲ ಎಂಬಷ್ಟರ ಮಟ್ಟಿಗೆ ಅವರು ಈ ಕ್ಷೇತ್ರದಲ್ಲಿ ಗಾಢವಾದ ಛಾಪು ಮೂಡಿಸಿದ್ದರು. ಪಂಪ, ನಾಡೋಜ ಪ್ರಶಸ್ತಿಗಳು ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ದಲಿತರು ಬಂದರು ದಾರಿಬಿಡಿ, ದಲಿತರ ಕೈಗೆ ರಾಜ್ಯಕೊಡಿ ಎಂಬ ಅವರ ಕ್ರಾಂತಿಗೀತೆ ಈಗಲೂ ದಲಿತ ಚಳವಳಿಗಳಲ್ಲಿ ಕೇಳಿಬರುವಂತಹದ್ದು. ಹೊಲೆ ಮಾದಿಗರ ಹಾಡು, ಸಾವಿರಾರು ನದಿಗಳು, ಮೆರವಣಿಗೆ, ಕಪ್ಪು ಕಾಡಿನ ಹಾಡು, ನನ್ನ ಜನಗಳು ಮತ್ತು ಇತರೆ ಕವಿತೆಗಳು ಅವರ ಪ್ರಮುಖ ಕವಿತಾ ಸಂಕಲನಗಳು. ಸದನದಲ್ಲಿ ಸಿದ್ದಲಿಂಗಯ್ಯ ಭಾಗ 1 ಮತ್ತು ಭಾಗ 2 ಅವರು ವಿಧಾನಪರಿಷತ್ ಸದಸ್ಯರಾಗಿ ಕರ್ತವ್ಯನಿರ್ವಹಿಸಿದ ಅನುಭವಗಳ ನೈಜ ಅನುಭವ ಕಥನ. ಅವರ ಆತ್ಮಕಥೆ ಊರು ಕೇರಿ ಭಾಗ 1 ಮತ್ತು ಭಾಗ 2ನ್ನು ಕನ್ನಡ ಸಾಹಿತ್ಯ ಯಾವಾಗಲೂ ನೆನಪಿನಲ್ಲಿ ಮರೆಯಲಾರದ ಸಾಹಿತ್ಯ ಕೃತಿ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement