ವಿದ್ಯಾರ್ಥಿಗಳೇ ಗಮನಿಸಿ, ಪ್ರಥಮ ಪಿಯುಸಿಗೆ ಈಗ ಆನ್​ಲೈನ್ ಪರೀಕ್ಷೆಗೆ ನಿರ್ಧಾರ

ಬೆಂಗಳೂರು: ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಪರೀಕ್ಷೆ ಮಾಡುವಂತೆ ಎಲ್ಲಾ ಕಾಲೇಜುಗಳಿಗೆ ಪಿಯು ಬೋರ್ಡ್‌ ಸುತ್ತೋಲೆ ಹೊರಡಿಸಿದೆ.
ದಾಖಲಾದ ಎಲ್ಲ ವಿದ್ಯಾರ್ಥಿಗಳನ್ನು ತೇರ್ಗಡೆಯಾಗಿದ್ದಾರೆಂದು ಪರಿಗಣಿಸಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.ದ್ವಿತೀಯ ಪಿಯುಸಿಗೆ ದಾಖಲಾತಿ ಪಡೆಯಲು ಹಾಗೂ ಆ ಅವಧಿಯಲ್ಲಿ ಅವರಿಗೆ ದೊರಕಬೇಕಾದ ವಿದ್ಯಾರ್ಥಿ ವೇತನದಂತಹ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳ ಫಲಿತಾಂಶವನ್ನು ಎಸ್ ಎ ಟಿ ಎಸ್ ತಂತ್ರಾಂಶದಲ್ಲಿ ಅಂಕಗಳ ರೂಪದಲ್ಲಿ ದಾಖಲೀಕರಿಸಬೇಕಿದೆ.
ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ 2 ವಿಷಯಗಳಿಗೆ ಪರೀಕ್ಷೆ ನಡೆಸಲು ಬೋರ್ಡ್‌ ಸೂಚನೆ ನೀಡಿದೆ. ಈ ಮೊದಲು ಪ್ರಥಮ ಪಿಯುಸಿ ಪಾಸ್ ಎಂದು ಶಿಕ್ಷಣ ಸಚಿವರು ತಿಳಿಸಿದ್ದರೂ ಸಹ, ಆನ್ ಲೈನ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಪಿಯು ಬೋರ್ಡ್ 2 ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್​ಸೈಟ್​ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ.

ಆನ್ಲೈನ್ ಪರೀಕ್ಷೆ ಹೇಗೆ ನಡೆಸಲಾಗುತ್ತದೆ?

*ಇಲಾಖೆ ವೆಬ್ ಸೈಟ್ ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳೇ ಡೌನ್ ಲೋಡ್ ಮಾಡಿಕೊಳ್ಳಬೇಕು

* ಪ್ರಶ್ನೆಗಳಿಗೆ ಉತ್ತರ ಬರೆದು ವಾಟ್ಸ್ ಅಪ್ , ಇ – ಮೇಲ್ , ಅಂಚೆ ಮೂಲಕ ರವಾನಿಸಬೇಕು* ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಉತ್ತರ ಪತ್ರಿಕೆಯನ್ನು

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಕಳುಹಿಸಬೇಕು .

* ಉಪನ್ಯಾಸಕರು ಮೌಲ್ಯಮಾಪನ ಮಾಡಬೇಕು .

* ಮೌಲ್ಯಮಾಪನದ ಬಳಿಕ ಉಪನ್ಯಾಸಕರು SATs ( ಸ್ಟೂಡೆಂಟ್ಸ್ ಅಚಿವ್ ಮೆಂಟ್ ಟ್ರಾಕಿಂಗ್ ಸಿಸ್ಟಂ ) ಮೂಲಕ ಫಲಿತಾಂಶ ಅಪ್ಲೋಡ್ ಮಾಡುತ್ತಾರೆ.
* ಅಸೆಸ್ಮೆಂಟ್ ಲೆಕ್ಕಾಚಾರದಲ್ಲಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ನಿರ್ಧಾರ ಕೈಗೊಂಡಿದೆ.

ಮೊದಲ ಅಸೆಸ್ಮೆಂಟ್ ಜೂ.20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂ.25ರೊಳಗೆ ಮೌಲ್ಯಮಾಪನ ಮಾಡಿರಬೇಕು. ಅದೇ ರೀತಿ ಎರಡನೇ ಅಸೆಸ್ಮೆಂಟ್ ಜೂನ್ 26 ರಿಂದ ಜುಲೈ 5ರ ಒಳಗೆ ನಡೆಸಬೇಕು.
ಉಪನ್ಯಾಸಕರು ಜುಲೈ 10ರೊಳಗೆ ಮೌಲ್ಯಮಾಪನ ಮಾಡಿರಬೇಕು. 2 ಪತ್ರಿಕೆಗಳ ಅಂಕವನ್ನು ಸಮೀಕರಣ ಮಾಡಿ ಜುಲೈ 15 ರೊಳಗೆ ಮುಗಿಸಿ, ಎರಡೂ ಪರೀಕ್ಷೆಗಳ ಅಂಕವನ್ನು ಜುಲೈ 20ರೊಳಗೆ ಅಪ್ಲೋಡ್ ಮಾಡಲು ಸಮಯ ನಿದಿ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಪ್ರತೀ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯವಾಗಿ ನೀಡಬೇಕು. ಪ್ರತಿ ಪತ್ರಿಕೆಗೆ 30 ರಂತೆ 2 ಪತ್ರಿಕೆಗೆ 60 ಅಂಕ ನೀಡಬೇಕು. 5 ಅಂಕವನ್ನ ಉಪನ್ಯಾಸಕರು ಆಂತರಿಕ ಅಂಕವೆಂದು ನೀಡಬೇಕು. ಪ್ರಯೋಗ ಸಹಿತ ವಿಷಯಗಳಿಗೆ ಪ್ರತ್ಯೇಕ ಅಂಕ ನೀಡಬೇಕು. ಈ ಹಿಂದೆ ನಡೆಸಿದ ಪ್ರಾಯೋಗಿಕ ತರಗತಿಗಳ ಆಧಾರದ ಮೇಲೆ ನಿಷ್ಪಕ್ಷಪಾತವಾಗಿ ಅಂಕ ನೀಡಬೇಕು ಎಂದು ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement