ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ; ನಟ ಚೇತನ್​ ಬಂಧನಕ್ಕೆ ಸಚಿವ ಹೆಬ್ಬಾರ ಒತ್ತಾಯ

ಹುಬ್ಬಳ್ಳಿ: ನಟ ಚೇತನ್​ ನೀಡಿದ ಹೇಳಿಕೆಯಿಂದಾಗಿ ಅವರ ವಿರುದ್ಧ ಬ್ರಾಹ್ಮಣ ಸಮುದಾಯ ಈಗ ತಿರುಗಿ ಬಿದ್ದಿದೆ. ಚೇತನ್​ ಮಾಡಿದ ಸೋಶಿಯಲ್​ ಮೀಡಿಯಾ ಪೋಸ್ಟ್​ನಿಂದಾಗಿ ವಿವಾದ ಶುರುವಾಗಿದೆ. ಕಾರ್ಮಿಕ ಸಚಿವ ಶಿವರಾಮ್​ ಹೆಬ್ಬಾರ್​ ಚೇತನ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ​ ಅವರನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿದೆ. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು’ ಎಂದು ಶಿವರಾಮ್​ ಹೆಬ್ಬಾರ್​ ತಮ್ಮ ಹೇಳಿಕೆಯನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​​ ಮಾಡಿದ್ದಾರೆ.
ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡುವ ಇಂತಹವರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಸಚಿವ ಶಿವರಾಮ್​ ಹೆಬ್ಬಾರ್​ ಬರೆದುಕೊಂಡಿದ್ದಾರೆ.
ಜೂ.6ರಂದು ಚೇತನ್​ ಅವರು ಟ್ವೀಟ್​ ಮತ್ತು ಫೇಸ್​ಬುಕ್​ ಪೋಸ್ಟ್​ನಿಂದ ವಿವಾದ ಶುರುವಾಗಿದೆ. ಚೇತನ್​ ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕೆಲವು ದಿನಗಳ ಹಿಂದೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ದೂರು ನೀಡಿದ್ದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

4.2 / 5. 11

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement