ಕುಟುಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿ ಭೇಟಿ : ಅರವಿಂದ ಬೆಲ್ಲದ ಸ್ಪಷ್ಟನೆ

ಬೆಂಗಳೂರು: ನಾನು ಖಾಸಗಿ ಕುಟುಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದೇನೆ. ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಸ್ಷಪ್ಟಪಡಿಸಿದ್ದಾರೆ.
ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಿಯಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement