ಕೆಪಿಸಿಸಿ ವಕ್ತಾರೆ ಭವ್ಯಾ ನರಸಿಂಹಮೂರ್ತಿಗೆ 50ಕ್ಕೂ ಹೆಚ್ಚು ಬೆದರಿಕೆ ಕರೆ: ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

ಬೆಂಗಳೂರು: ಕೆಪಿಸಿಸಿ ವಕ್ತಾರೆ ಭವ್ಯಾ ನರಸಿಂಹಮೂರ್ತಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.
ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಮಹಿಳಾ ನಾಯಕರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭವ್ಯಾ ಅವರಿಗೆ ತೇಜೋವಧೆ ಮಾಡುವ 50ಕ್ಕೂ ಹೆಚ್ಚು ಕರೆಗಳು ಬಂದಿವೆ, ಈ ಬಗ್ಗೆ ಪೊಲೀಸರಿಗೆ ದೂರು ಕೊಡಲಾಗಿದೆ, ಇದು ಕೇವಲ ಒಬ್ಬ ಮಹಿಳೆ ಅಲ್ಲ, ದೇಶದ ಮಹಿಳೆಯರ ಪ್ರಶ್ನೆ’ ಎಂದರು.
ಬಿಂದು ಗೌಡ ಅವರ ವಿರುದ್ಧವೂ ತೇಜೋವಧೆ ಮಾಡುತ್ತಿದ್ದಾರೆ, ನಮ್ಮ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನೂ ಅವಹೇಳನ ಮಾಡುತ್ತಿದ್ದಾರೆ ಎಂದು ದೂರಿದರು.
ನಕಲಿ ಖಾತೆ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ, ಇದರ ಹಿಂದಿರುವವರು ಯಾರು, ಇವರಿಗೆ ತೊಂದರೆ ಕೊಡುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.
‘ ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ‘ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲದಂತಾಗಿದೆ, ಮಹಿಳೆಯರನ್ನು ಲಕ್ಷ್ಮೀ, ಸರಸ್ವತಿ ಎಂದು ಪೂಜೆ ಮಾಡುತ್ತೇವೆ, ನಮಗೆ ಪೂಜೆ ಬೇಡ ಮರ್ಯಾದಿ ಕೊಟ್ಟರು ಸಾಕು’ ಎಂದು ಹೇಳಿದರು.
ಮಹಿಳೆಯರಿಗೆ ಇಷ್ಟೊಂದು ಬೆದರಿಕೆ ಕರೆ ಬರುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು, ಬಿಜೆಪಿಯಲ್ಲೂ ಮಹಿಳೆಯರಿದ್ದಾರೆ, ಅವರ ಬಗ್ಗೆಯೂ ಈ ರೀತಿ ಕರೆ ಬಂದರೆ ಹೇಗೆ? ಆ ರೀತಿ ಮಹಿಳೆಯರನ್ನು ಹೆದರಿಸುವುದು ಸರಿಯಲ್ಲ, ಸದನದಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement