2022ರ ಜೂನ್​ ಕೊನೆಯೊಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ; ಸಿಎಂ ಬಿಎಸ್​ವೈ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯನ್ನು ಮುಂದಿನ ವರ್ಷಕ್ಕೆ ಸಿದ್ಧವಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯುರಪ್ಪ ಹೇಳಿದರು.
ಶನಿವಾರ ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ಮುಂದಿನ ವರ್ಷದ ಜೂನ್​ ಅಂತ್ಯದ ​ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ, ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಆಗುವುದರಿಂದ ದೊಡ್ಡ ದೊಡ್ಡ ಕೈಗಾರಿಕೆಗಳು ನಗರಕ್ಕೆ ಬರಲಿದೆ. ಇದರಿಂದ ಯುವಕರಿಗೆ ಉದ್ಯೋಗ ಅವಕಾಶ ದೊರೆಯಲಿದೆ ಎಂದರು.
ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಂಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15900 ಮೀಟರ್ ಪೈಕಿ 11500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಟರ್ಮಿನಲ್ ಕಟ್ಟಡದ ವಿನ್ಯಾಸ ಅನಾವರಣದ ವೆಚ್ಚ 384 ಕೋಟಿ ರೂ ಆಗಿದೆ , ಪ್ಯಾಸೆಂಜರ್ ಟರ್ಮಿನಲ್ ಕಟ್ಟಡ, ಎ.ಟಿಸಿ ಟವರ್ ಕಟ್ಟಡ, ಎಲೆಕ್ಟಿಕಲ್ ಸಬ್ ಸ್ಟೇಷನ್, (2 ಸಂಖ್ಯೆ) ಟೈರ್ ಸ್ಟೇಷನ್, ಮೇಲ್ಮಟ್ಟದ ನೀರಿನ ತೊಟ್ಟಿ, ವಾಚ್ ಟವರ್ (09 ಸಂಖ್ಯೆ), ಪಂಪ್‌ಹೌಸ್, ನೆಲಮಟ್ಟದಲ್ಲಿ ನೀರಿನ ತೊಟ್ಟಿಸೇರಿದಂತೆ ಪ್ಯಾಕೇಜ್-02 ಕಾಮಗಾರಿಗೆ ಒಪ್ಪಂದ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾಮಗಾರಿ ಪ್ರಾರಂಭಿಸಬೇಕಾಗಿದೆ. ಹೆಚ್ಚಿನ ಹಣಕಾಸು ಸಮಸ್ಯೆ ಇದ್ದರೂ ಹಣಕಾಸು ಜೋಡಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಶಿಕಾರಿಪುರ ಸಮೀಪವಿರುವ ಶಿವ ಶರಣೆ ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ರಾಘವೇಂದ್ರ ಹಾಗೂ ಮಲೆನಾಡು ಮಠಾಧೀಶರ ಪರಿಷತ್ತಿನ ಸ್ವಾಮೀಜಿಗಳು ಹಾಜರಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement