ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರ: ಪಿಯುಸಿ ಎರಡನೇ ವರ್ಷದ ಪರೀಕ್ಷೆ ರದ್ದಾದ ಕಾರಣ ಮನನೊಂದು ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾದ ಘಟನೆ ಶಿರಸಿಯ ಯಡಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಧನ್ಯ (18) ಪರೀಕ್ಷೆ ರದ್ದಾದ ಹಿನ್ನಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಈಕೆ ಶಿರಸಿಯ ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತಿದ್ದಳು.
ತಾನು ಶಾಲೆಗೆ ಪ್ರಥಮ ರ್‍ಯಾಂಕ್‌ ಬರಬೇಕು ಎಂಬ ಕನಸನ್ನು ಹೊತ್ತು ಪರೀಕ್ಷೆಗಾಗಿ ಅಧ್ಯಯನ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಆದರೆ ಕೊರೊನಾ ಕಾರಣದಿಂದಾಗಿ ಪರೀಕ್ಷೆಗಳನ್ನು ಸರ್ಕಾರ ರದ್ದು ಮಾಡಿದೆ. ಹಾಗೆಯೇ ಪ್ರಥಮ ಪಿಯುಸಿ ಅಂಕದ ಆಧಾರದಲ್ಲಿ ದ್ವಿತೀಯ ಪಿಯುಸಿ ಅಂಕ ನೀಡಲು ಸರ್ಕಾರ ನಿರ್ಧರಿಸಿದೆ.ಹೀಗಾಗಿ ತಾನು ವರ್ಷ ಪೂರ್ತಿ ಓದಿದ್ದು ವ್ಯರ್ಥವಾಯಿತು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಈ ಬಗ್ಗೆ ಶಿರಸಿ ಗ್ರಾಮಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement