ಬೆಂಗಳೂರು: ಸುಮಾರು ಒಂದೂವರೆ ತಿಂಗಳ ಕಾಲ ಸ್ತಬ್ಧವಾಗಿದ್ದ ಕರ್ನಾಟಕ ನಾಳೆಯಿಂದ ಸ್ವಲ್ಪ ಚುರುಕುಗೊಳ್ಳಲಿದೆ.
ಸೋಮವಾರದಿಂದ ಕರ್ನಾಟಕದ 19 ಜಿಲ್ಲೆಗಳಲ್ಲಿ ಲಾಕ್ಡೌನ್ ಭಾಗಶಃ ಸಡಿಲಗೊಳ್ಳಲಿದೆ. ಆದರೂ ಕೆಲವೊಂದು ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಯಲ್ಲಿರುತ್ತದೆ. ಸರ್ಕಾರ ಇದಕ್ಕಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಮಾಡಿದೆ.
ಆದರೆ ಕೋವಿಡ್ ಸಕಾರಾತ್ಮಕದರ ಶೇ.ಕ್ಕಿಂತ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 21ರ ವರೆಗೂ ಲಾಕ್ಡೌನ್ ಯಥಾಸ್ತಿತಿ ಮುಂದುವರಿಯಲಿದೆ.
ಜಿಲ್ಲೆಗಳಾದ ಮೈಸೂರು, ಚಾಮರಾಜ ನಗರ, ಹಾಸ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆಯಿಂದಜೂನ್ 21ರ ವರೆಗೂ ಲಾಕ್ಡೌನ್ ಮುಂದುವರೆಯಲಿದೆ.
ಉಳಿದ ಜಿಲ್ಲೆಗಳಲ್ಲಿ ಲಾಕ್ಡೌನ್ ಅನ್ನು ಭಾಗಶಃ ಸಡಿಲ ಮಾಡಲಾಗಿದ್ದು ಜನರಿಗೆ ಹಾಗೂ ಕೈಗಾರಿಕೆಗಳಿಗೆ ಕಾರ್ನಿರ್ವಹಿಸಲು ಕೆಲವೊಂದು ವಿನಾಯಿತಿ ನೀಡಲಾಗಿದೆ. ಇದು ಜೂನ್ 14ರ ಬೆಳಿಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ.
ನಾಳೆಯಿಮದ (ಸೋಮವಾರ) ಭಾಗಶಃ ಅನ್ಲಾಕ್ ಆಗುವ 19 ಜಿಲ್ಲೆಗಳಲ್ಲಿ ಯಾವುದಕ್ಕೆಲ್ಲ ಅನುಮತಿ ನೀಡಲಾಗಿದೆ ಹಾಗೂ ಯಾವುದೆಲ್ಲ ಮುಂದುವರಿಯಲಿದೆ ಎಂದು ಸರ್ಕಾರ ಮೊನ್ನೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಸರ್ಕಾರ 19 ಜಿಲ್ಲೆಗಳಲ್ಲಿ ಯಾವುದಕ್ಕೆಲ್ಲ ಅನುಮತಿ ನೀಡಿದೆ..:
* ಸಾರ್ವಜನಿಕ ವಿತರಣೆ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ.
*ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್ಗಳು ಮತ್ತು ಪ್ರಾಣಿಗಳ ಮೇವಿನೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.
*ಬಾರ್ ಮತ್ತು ರೆಸ್ಟೋರೆಂಟುಗಳಲ್ಲಿ ಕೇವಲ ಪಾರ್ಸೆಲ್ಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ.
*. ಬೀದಿ ಬದಿ ವ್ಯಾಪಾರಿಗಳಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ
*ಎಲ್ಲ ಕಾರ್ಖಾನೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿಯ ಹಾಜರಾತಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ
* ಆದರೆ ಗಾರ್ಮೆಂಟ್ ಕೈಗಾರಿಕೆಗಳಿಗೆ ಮಾತ್ರ ಶೇ. 30ರಷ್ಟು ಸಿಬ್ಬಂದಿಯ ಹಾಜರಾತಿಯೊಂದಿಗೆ ಮಾತ್ರ ಕಾರ್ಯ ನಿರ್ವಹಿಸಲು ಅನುಮತಿ.
* ಎಲ್ಲ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ, ನಿಮಾಣ ಚಟುವಟಿಕೆಗೆ ಸಂಬಂಧಿಸಿದ ಅಂಗಡಿಗಳು, ಮುಖ್ಯವಾಗಿ ಸಿಮೆಂಟ್ ಹಾಗೂ ಸ್ಟೀಲ್ ಸಾಮಗ್ರಿಗಳ ಅಂಗಡಿಗಳನ್ನು ತೆರೆಯಲು ಅವಕಾಶ
* ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆ ವರೆಗೆ ತೆರೆಯಲು ಅವಕಾಶ
*.ಆಟೋ ಮತ್ತು ಟ್ಯಾಕ್ಸಿಗಳಿಗೆ ಸಂಚರಿಸಲು ಅವಕಾಶ. ಆದರೆ ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ
* ಅಗತ್ಯವಿದ್ದರೆ ಅಂತರ್ ಜಿಲ್ಲೆ ಸಂಚಾರಕ್ಕೆ ಅನುಮತಿ
* ಅನಾರೋಗ್ಯ ಪೀಡಿತ ರೋಗಿಗಳ ತುರ್ತು ಸಂಚಾರಕ್ಕೆ ಅವಕಾಶ.
* ಮೆಡಿಕಲ್ ಸಿಬ್ಬಂದಿಗೆ ಅವಕಾಶ
*. ಇ-ಕಾಮರ್ಸ್ ಸರಕು ಸಾಗಣೆ ಮತ್ತು ಆನ್ಲೈನ್ ಮನೆ ಸೇವೆಗಳಿಗೆ 24*7 ಸೇವೆಗಳಿಗೆ ಅವಕಾಶ
* ಅಂತರ್ಜಾಲ, ಟೆಲಿಕಾಂ ಸೇವೆ ಸಿಬ್ಬಂದಿ ಓಡಾಟಕ್ಕೆ ಅವಕಾಶ
* ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಐಡಿ ಕಾರ್ಡ್ ಇಟ್ಟುಕೊಂಡು ಸಂಚಾರಕ್ಕೆ ಅವಕಾಶ
*ವಿಮಾನ ಮತ್ತು ರೈಲು ಸಂಚಾರಕ್ಕೆ ಅವಕಾಶ. ಟಿಕೆಟ್ ತೋರಿಸಿ ಪ್ರಯಾಣಿಸಬಹುದು.
*. ಬೆಳಗ್ಗೆ 6ರಿಂದ 2 ಗಂಟೆಯವರೆಗೆ ಕನ್ನಡಕದ ಅಂಗಡಿ ತೆರೆಯಲು ಅವಕಾಶ
* ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಕ್ಕೆ ಅವಕಾಶ. ಆದರೆ 40 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ
* ಈ ಮೊದಲಲು ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ಕಚೇರಿಗಳ ಜೊತೆಗೆ ಕೃಷಿ ಮತ್ತು ಮಿತ್ರರಾಷ್ಟ್ರಗಳ ಸರ್ಕಾರಿ ಕಚೇರಿಗಳು, ಪಿಡಬ್ಲ್ಯುಡಿ, ವಸತಿ, ಆರ್ಟಿಒಗಳು, ಸಹಕಾರ, ನಬಾರ್ಡ್ ಮತ್ತು ಕಂದಾಯ ಇಲಾಖೆಗಳು ಮತ್ತು ಭಾರತ ಸರ್ಕಾರದ ಕಚೇರಿಗಳು ಶೇಕಡಾ 50 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಬಹುದು.
ಯಾವುದಕ್ಕೆ ಅನುಮತಿ ಇಲ್ಲ..
*, ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ, ಮೆಟ್ರೋ ರೈಲು ಸಂಚಾರ ಸ್ಥಗಿತ
*. ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೋವಿಡ್ ನೈಟ್ ಕರ್ಫ್ಯೂ ಜಾರಿ. ಈ ವೇಳೆ ಸಂಚಾರಕ್ಕೆ ನಿರ್ಬಂಧ
* ವಾರದ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಸಂಚಾರಕ್ಕೆ ನಿರ್ಬಂಧ
(ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಪಿಡಿಎಫ್ನಲ್ಲಿ ಕೊಡಲಾಗಿದೆ)
Revised Guidelines Dated 11-6-2021 to break the chain of Covid 19 transmission.


ನಿಮ್ಮ ಕಾಮೆಂಟ್ ಬರೆಯಿರಿ