‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನಿಗೆ ಒಂದು ದಿನದಲ್ಲೇ ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ

posted in: ರಾಜ್ಯ | 1

ಮೈಸೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಬೇಕು ಎಂದು ಆಗ್ರಹಿಸಿ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್ ಆರಂಭವಾಗಿದೆ.
ಶನಿವಾರ ಸಂಜೆ ವೇಳೆಗೆ ಈ ಅಭಿಯಾನ ಆರಂಭವಾಗಿದ್ದು ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಜನರಿಂದ ಇದರಲ್ಲಿ ಸಹಿ ಸಂಗ್ರಹವಾಗಿದೆ.
ರೋಹಿಣಿ ಅವರನ್ನು ಮತ್ತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಎಂದು ‘ಚೇಂಜ್ ಆರ್ಗ್’ ಸಂಸ್ಥೆಯಿಂದ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದ್ದು, ಇದಕ್ಕೆ ಉತ್ತಮ ಜನಸ್ಪಂದನೆ ಸಿಕ್ಕಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.
ಈಗಾಗಲೇ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಭೂಹಗಣದ ತನಿಖೆ ನಡೆಸಬೇಕು ಹಾಗೂ ಅದಕ್ಕೆ ರೋಹಿಣಿ ಸಿಂಧೂರಿ ಅವರನ್ನೇ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

4 / 5. ಒಟ್ಟು ವೋಟುಗಳು 5

  1. Vinayak Bhat

    ರೋಹಿಣಿ ಸಿಂಧೂರಿ ಯವರು ಪುನಃ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿ.

ನಿಮ್ಮ ಕಾಮೆಂಟ್ ಬರೆಯಿರಿ