ಅಪಘಾತದಿಂದ ನಟ ಸಂಚಾರಿ ವಿಜಯ್​ ಸ್ಥಿತಿ ಗಂಭೀರ

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ಕನ್ನಡದ ನಟ ಸಂಚಾರಿ ವಿಜಯ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ನಿನ್ನೆ ರಾತ್ರಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೆದುಳು ಹಾಗೂ ಬಲ ತೊಡೆಗೆ ತೀವ್ರ ಗಾಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
. ನಿನ್ನೆ ರಾತ್ರಿ ಬೈಕ್ ನಲ್ಲಿ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೆದುಳಿನ ಭಾಗದಲ್ಲಿ ತೀವ್ರವಾಗಿ ರಕ್ತಸ್ರಾವವಾಗಿದೆ, ಅವರ ಬಲ ತೊಡೆಯ‌ ಭಾಗ ಮುರಿದಿದೆ. ಹೀಗಾಗಿ ಐಸಿಯುನಲ್ಲಿಟ್ಟು‌ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಗೆಳೆಯ ನವೀನ್ ಜೊತೆ ಸಂಚಾರಿ ವಿಜಯ್ ಶನಿವಾರ ರಾತ್ರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

ನಿಮ್ಮ ಕಾಮೆಂಟ್ ಬರೆಯಿರಿ

advertisement