ಖಾಸಗಿ ಶಾಲೆಗಳಲ್ಲಿ ‌ಶುಲ್ಕ ನಿಗದಿ: ಶಿಕ್ಷಣ ಸಚಿವರ ಜೊತೆ ಸಭೆ

ಬೆಂಗಳೂರು: ನಗರದ ಖಾಸಗಿ ಶಾಲೆಗಳಲ್ಲಿ ‌ಶುಲ್ಕ ನಿಗದಿ ಸಂಬಂಧ ಸದ್ಯದಲ್ಲೇ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟವರ ಜೊತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಖಾಸಗಿ ಶಾಲೆಗಳ ಶುಲ್ಕ ಕಡಿಮೆ ಮಾಡುವುದಿಲ್ಲವೆಂದು ‌ ಖಾಸಗಿ ಶಾಲೆಗಳ ಒಕ್ಕೂಟ ಹೇಳಿರುವುದು ನನ್ನ ಗಮನಕ್ಕೆ ಬಂದಿದೆ ಎಂದುಹೇಳಿದ ಅವರು, ಸದ್ಯದಲ್ಲೇ ಶುಲ್ಕ ನಿಗದಿ ಕುರಿತು ಶಿಕ್ಷಣ ಸಚಿವ ಸುರೇಶಕುಮಾರ್ ಜೊತೆ ಚರ್ಚೆ ಮಾಡುತ್ತೇನೆ. ಕಾನೂನಿನ ಚೌಕಟ್ಟಿನೊಳಗೆ ಏನು ಮಾಡಲೋ ಸಾಧ್ಯವೋ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಚಿವರು, ಸಂಸದರು, ಶಾಸಕರ ಜೊತೆ ಸರ್ಕಾರ ಹಾಗೂ ಪಕ್ಷದ ಸ್ಥಿತಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಉಸ್ತುವಾರಿಗಳು ರಾಜ್ಯಕ್ಕೆ ಬರುವುದು ವಾಡಿಕೆ ಎಂದು ಮಾಹಿತಿ ನೀಡಿದರು.
ಕೋವಿಡ್ ನಿರ್ವಹಣೆ, ಪಕ್ಷದ ಸಂಘಟನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲ ಸಹಕಾರ ನೀಡಲಾಗುವುದು. ಪ್ರತಿಯೊಬ್ಬರೂ ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಬಹುದು ಎಂದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement