ಬ್ರೇನ್ ಡೆಡ್ .. ಬದುಕಿನ ಸಂಚಾರ ಮುಗಿಸಿದ ಕನ್ನಡದ ಪ್ರತಿಭಾವಂತ ನಟ ಸಂಚಾರಿ ವಿಜಯ, ಅಂಗಾಂಗ ದಾನಕ್ಕೆ ನಿರ್ಧಾರ

ಬೆಂಗಳೂರು: ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟುಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯ ಐಸುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬ್ರೇನ್ ಡೆಡ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ. .
ಈ ಕುರಿತು ಟ್ವಿಟ್ಟರಿನಲ್ಲಿ ನಟ ಸುದೀಪ ಮಾಹಿತಿ ಮಾಹಿತಿ ಹಂಚಿಕೊಂಡಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಅನೇಕ ಬಾರಿ ನಾನು ಅವರು ಭೇಟಿಯಾಗಿದ್ದೆವು. ಅಲ್ಲದೇ ಅವರ ಮುಂದಿನ ಚಿತ್ರದ ಬಗ್ಗೆಯೂ ಕುತೂಹಲ ಮೂಡಿತ್ತು. ಮುಂದಿನ ಚಿತ್ರ ಬಿಡುಗಡೆ ಮುನ್ನವೇ ಅವರು ಇನ್ನಿಲ್ಲವಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ ಎಂದು ಟೈಮ್ಸ್‌ ನೌ.ಕಾಮ್‌ ವರದಿ ಮಾಡಿದೆ.
ಶನಿವಾರ ರಾತ್ರಿ ಗೆಳೆಯ ನವೀನ ಜೊತೆಗೆ ಬೈಕ್ ನಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಅಪಘಾತಗೊಂಡಿದ್ದರು. ತಲೆಯ ಎಡಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದು, ರಕ್ತಸ್ರಾವ ಕೂಡ ಆಗಿತ್ತು. ಕೂಡಲೇ ಅವರನ್ನು ನಟ ಸುದೀಪ್ ಮನವಿ ಮೇರೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ಮೂಲಕ ರಕ್ತಸ್ರಾವವನ್ನು ಸರಿ ಮಾಡಲಾಗಿತ್ತು.
ಐಸಿಯುನಲ್ಲಿ ಇಂದು (ಸೋಮವಾರ) ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ, ಬ್ರೈನ್ ಸ್ಟ್ರೋಕ್ ಉಂಟಾಗಿ, ಅವರು ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದ್ದರು. ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂಬುದಾಗಿಯೂ ಅಪೋಲೋ ಆಸ್ಪತ್ರೆಯ ವೈದ್ಯ ಡಾ.ಅರುಣ್ ನಾಯ್ಕ್ ಮಾಹಿತಿ ನೀಡಿದ್ದರು. ಈ ಬಗ್ಗೆ ಅವರ ಕುಟುಂಬಸ್ಥರಿಗೂ ತಿಳಿಸಿದ್ದಾಗಿ ಹೇಳಿದ್ದರು.
ಅವರ ಕುಟುಂಬಸ್ಥರು ನಟ ಸಂಚಾರಿ ವಿಜಯ ಅಂಗಾಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದಾಗಿ ಪ್ರಕಟಿಸಿದ್ದರು.
ಇದರ ಮಧ್ಯೆ ಸಂಚಾರಿ ವಿಜಯ್ ಅವರ ಮೆದುಳು ಕೆಲಸ ಮಾಡೋದನ್ನು ನಿಲ್ಲಿಸಿದೆ ಎಂಬುದಾಗಿ ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸುವ ಮೂಲಕ, ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ತೀರ ಗಂಭೀರವಾಗಿದೆ ಎಂದುಗಿ ತಿಳಿಸಿದ್ದರು.
ಇದೀಗ ಸಂಚಾರಿ ವಿಜಯ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ಮಾಹಿತಿ ಬಂದಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪ್ರತಿಭಅವಂತ ನಟ ವಿಜಯ ಇನ್ನಿಲ್ಲವಾಗಿದ್ದಾರೆ.
ಸಂಚಾರಿ ವಿಜಯ ಹೆಸರಿನಿಂದ ಪರಿಚಿತರಾಗಿರುವ ಬಿ. ವಿಜಯಕುಮಾರ್ ರಮಗಬೂಮಿಯಿಮದ ಬಂದ ಪ್ರತಿಭಾವಂತ ನಟ. ಸಂಚಾರಿ ಹೆಸರಿನ ನಾಟಕ ತಂಡದಲ್ಲಿ ಇವರು ಒಬ್ಬರಾಗಿದ್ದರಿಂದ ಇವರಿಗೆ ಸಂಚಾರಿ ವಿಜಯ ಎಂಬ ಹೆಸರು ಬಂತು. 2014ರ ಸಾಲಿನ 62ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿಯಲ್ಲಿ ನಾನು ಅವನಲ್ಲ…ಅವಳು..ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
ಜೀವನ – ಶಿಕ್ಷಣ
ಜುಲೈ 17, 1983ರಲ್ಲಿ ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ, ಸಿಂಗಟಗೆರೆ ಹೋಬಳಿಯ, ರಂಗಾಪುರ ಗ್ರಾಮದಲ್ಲಿ ಜನಿಸಿದ್ದರು. ಇವರದ್ದು ಕಲೆಯ ಹಿನ್ನೆಲೆಯ ಕುಟುಂಬವಾಗಿದ್ದು, ತಂದೆ ಬಸವರಾಜಯ್ಯನವರು ಚಿತ್ರಕಲಾವಿದರು, ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ತಾಯಿ ಗೌರಮ್ಮನವರು ಜಾನಪದ ಕಲಾವಿದರಾಗಿದ್ದು, ಭದ್ರಾವತಿಯ ರೇಡಿಯೋದಲ್ಲಿ ಅನೇಕ ಕಾರ್ಯಕ್ರಗಳನ್ನು ನೀಡಿದ್ದರು. ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದರು.
ಕೆಲಕಾಲ ಕೆಐಇಟಿ ಶಿಕ್ಷಣ ಸಂಸ್ಥೆಯಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಇವರು, ತಮ್ಮ ತಮ್ಮ ಕನಸನ್ನು ಈಡೇರಿಸಿಕೊಳ್ಳಲು ತಮ್ಮ ಕೆಲಸಕ್ಕೆ ವಿದಾಯ ಹೇಳಿ ಪೂರ್ಣಪ್ರಮಾಣವಾಗಿ ರಂಗಭೂಮಿಯಲ್ಲಿ ತೊಡಗಿಸಿಕೊಂಡರು. ಹತ್ತು ವರ್ಷಗಳಿಂದ ಸಂಚಾರಿ ಥಿಯೇಟರಿನ ರಂಗತಂಡದ ಹಲಾವಾರು ನಾಟಕಗಳಲ್ಲಿ ಅಭಿನಯಿಸುವುದರ ಜೊತೆಗೆ ಕನ್ನಡದ ಹಲವಾರು ರಂಗತಂಡಗಳಲ್ಲಿ ನಟಿಸಿದ್ದಾರೆ.
ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತವನ್ನೂ ಅಭ್ಯಸಿಸಿರುವ ಇವರು, ಹಲವಾರು ನಾಟಕಗಳಲ್ಲಿ ಹಾಡಿದ್ದು, ರಿಯಾಲಿಟಿ ಶೋಗಳಲ್ಲಿಯೂ ಸಹ ಭಾಗವಹಿಸಿದ್ದರು. ಕನ್ನಡ ಚಿತ್ರರಂಗದ ಜೊತೆಗೆ ತಮಿಳು, ತೆಲುಗು ಮತ್ತು ಹಿಂದಿ ಸಿನೆಮಾದಲ್ಲಿಯೂ ಕೆಲಸ ಮಾಡಿದ್ದರು.
62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ, ಇವರಿಗೆ ಕನ್ನಡದ ನಾನು ಅವನಲ್ಲ…ಅವಳು ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದ್ದು, ಈ ಚಿತ್ರದಲ್ಲಿ ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿದ್ದಾರೆ. ಇದೇ ಪಟ್ಟಿಯಲ್ಲಿ, ಮುಖ್ಯ ಪಾತ್ರ ನಿರ್ವಹಿಸಿದ್ದ ಮತ್ತೊಂದು ಸಿನೆಮಾ ಹರಿವು, ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಲನಚಿತ್ರ ಪ್ರಶಸ್ತಿ ಪಡೆದಿದ್ದರು.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement